ಕೋಲಾರ: ರೈತರು ತಮ್ಮ ಪಹಣಿಗಳಿಗೆ ಆಧಾರ್ ಲಿಂಕ್ ಮಾಡಿಸಲು ಜಿಲ್ಲಾಡಳಿತದಿಂದ ಅವಕಾಶ ಕಲ್ಪಿಸಲಾಗಿದ್ದು, ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂರ‍್ಕಿಸಿ ಕೂಡಲೇ ಲಿಂಕ್ ಮಾಡಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕಂದಾಯ ಇಲಾಖೆಯು ಆರ್‌ಟಿಸಿಯನ್ನು ಆಧಾರ್‌ನೊಂದಿಗೆ ಜೋಡಣೆ ಮಾಡಲು ಮುಂದಾಗಿದೆ. ಜಿಲ್ಲಾದ್ಯಂತ ಈಗಾಗಲೇ ಶೆ.70ರಷ್ಟು ರ್.ಟಿ.ಸಿ.ಗಳನ್ನು ಆಧಾರ್‌ಗೆ ಜೋಡಣೆ ಮಾಡಲಾಗಿದ್ದು, ಇನ್ನು ಶೇ.30ರಷ್ಟು ಬಾಕಿ ಉಳಿದುಕೊಂಡಿದೆ. ಇದನ್ನು ಆಧಾರ್‌ನೊಂದಿಗೆ ಜೋಡಣೆ ಮಾಡುವ ಕರ‍್ಯಕ್ಕೆ ಕೆಲವು ರೈತರು ಅಸಹಕಾರ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅತಿವೃಷ್ಠಿ-ಅನಾವೃಷ್ಠಿ ಆದಂತಹ ಸಂರ‍್ಭದಲ್ಲಿ ಪರಿಹಾರ ನೀಡಲು ಆಧಾರ್ ಜೋಡಣೆಯಾಗಿದ್ದರೆ ಹಣ ರಾವಣೆ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಇದರ ಜತೆಗೆ ನಿಮ್ಮ ಆರ್‌ಟಿಸಿಯಲ್ಲಿ ಏನಾದರೂ ಲೋಪದೋಷಗಳಿದ್ದರೂ ಸರಿಪಡಿಸಿಕೊಳ್ಳಲು ಸಹಕಾರಿಯಾಗುತ್ತದೆ. ಆರ್‌ಟಿಸಿಯನ್ನು ಬೇರೆಯವರು ತಿದ್ದುಪಡಿ ಮಾಡಿಕೊಳ್ಳುವುದನ್ನು ತಡೆಯುವುದಕ್ಕೂ ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈಗಾಗಲೇ ಕಂದಾಯ ಇಲಾಖೆಯ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ನಿಮ್ಮ ಗ್ರಾಮಗಳಿಗೆ ಬರುತ್ತಿದ್ದು, ಅವರಿಗೆ ಸಹಕರಿಸಿ ಮೊಬೈಲ್‌ಗಳಿಗೆ ಬರುವ ಒಟಿಪಿ ನೀಡಿದ ಕೂಡಲೇ ಆರ್‌ಟಿಸಿಗೆ ಆಧಾರ್ ನಂಬರ್ ಜೋಡಣೆ ಮಾಡಲಾಗುತ್ತದೆ. ಇದರಿಂದ ಕಂದಾಯ ಸೇವೆ ನೀಡುವುದಕ್ಕೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಪಹಣಿಗೆ ಆಧಾರ್ ಲಿಂಕ್ ಮಾಡಿಸಿ
You Might Also Like
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!
ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…
ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information
ಬೆಂಗಳೂರು: ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…