ಲಯನ್ಸ್ ಕ್ಲಬ್ ಸಮಾಜಮುಖಿ ಕಾರ್ಯ ಪ್ರಶಂಸನೀಯ

sanmana
ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ರವಿಕಲಾ ವಿ.ಶೆಟ್ಟಿ ಬೆಳ್ವೆ ದಂಪತಿಯನ್ನು ಸನ್ಮಾನಿಸಲಾಯಿತು.
Published on

ವಿಜಯವಾಣಿ ಸುದ್ದಿಜಾಲ ಬೆಳ್ವೆ

ಆರ್ಡಿ, ಬೆಳ್ವೆ, ಗೋಳಿಯಂಗಡಿ ಲಯನ್ಸ್ ಕ್ಲಬ್ ಹಲವು ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಶ್ರೇಷ್ಠಸ್ಥಾನದೊಂದಿಗೆ ಜನ ಮೆಚ್ಚುಗೆಗೆ ಪಾತ್ರವಾಗಿರುವುದು ಪ್ರಶಂಸನೀಯ ಎಂದು ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ ಹೇಳಿದರು.

ಬೆಳ್ವೆ ಸಂದೇಶ್ ಕಿಣಿ ಮೇಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್‌ಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಅಧ್ಯಕ್ಷತೆ ವಹಿಸಿದ್ದರು. ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ರವಿಕಲಾ ವಿ.ಶೆಟ್ಟಿ ಬೆಳ್ವೆ ದಂಪತಿಯನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಶುಭ ಹಾರೈಸಿದರು. ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಸೇವಾ ಕಾರ್ಯಕ್ಕೆ ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ನಗದು ಪುರಸ್ಕಾರ ನೀಡಿದರು.

ಮೊಳಹಳ್ಳಿ ಶಿವಶಾಂತಿ ಲಯನ್ಸ್ ಕ್ಲಬ್ ಅಧ್ಯಕ್ಷ ಯು.ಮೋಹನದಾಸ್ ಶೆಟ್ಟಿ, ಲಯನ್ಸ್ ಕ್ಲಬ್ ವಲಯ ಕಾರ್ಯದರ್ಶಿ ವೈ.ಪಟ್ಟಾಭೀರಾಮ್ ಭಟ್ ಮರೂರು, ಹಾಲಾಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೌತಮ್ ಶೆಟ್ಟಿ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಸ್ಥಾಪಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ, ಮಾಜಿ ಅಧ್ಯಕ್ಷ ಬಿ.ಸತೀಶ್ ಕಿಣಿ ಬೆಳ್ವೆ, ಉಪಾಧ್ಯಕ್ಷ ಬಾಬು ಶೆಟ್ಟಿ ಜಗ್ಲುಗುಡ್ಡೆ ಮೊದಲಾದವರಿದ್ದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ ನಿರೂಪಿಸಿದರು. ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net