ಸಮಾಜಮುಖಿ ಕಾರ್ಯದಿಂದ ಜನಮನಗೆದ್ದ ಲಯನ್ಸ್

lions
Published on

ಹೆಬ್ರಿ: ಗ್ರಾಮೀಣ ಪ್ರದೇಶ ಮುನಿಯಾಲಿನ ಲಯನ್ಸ್ ಕ್ಲಬ್ ಜನಸೇವೆ ಮೂಲಕ ಅತ್ಯುನ್ನತವಾಗಿ ಬೆಳೆಯುತ್ತಿದೆ. ಸಮಾಜಮುಖಿ ಕಾರ್ಯ, ಆರೋಗ್ಯ, ಶಿಕ್ಷಣ ಹಾಗೂ ಶಾಶ್ವತ ಕಾರ್ಯದಿಂದ ನಿರಂತರವಾಗಿ ಜನಮನ ಗೆದ್ದಿದೆ ಎಂದು ಲಯನ್ಸ್ ಜಿಲ್ಲಾ ಪ್ರಥಮ ಉಪ ಜಿಲ್ಲಾ ಉಪ ಗವರ್ನರ್ ಸಪ್ನಾ ಸುರೇಶ್ ಹೇಳಿದರು.

ಮುನಿಯಾಲು ಲಯನ್ಸ್ ಕ್ಲಬ್‌ಗೆ ಲಯನ್ಸ್ ಜಿಲ್ಲಾ ಪ್ರಥಮ ಉಪ ಜಿಲ್ಲಾ ಉಪ ಗವರ್ನರ್, ಪ್ರಾಂತೀಯ ಹಾಗೂ ವಲಯಾಧ್ಯಕ್ಷರ ಭೇಟಿ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.

ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಬೇಳಂಜೆ ಹರೀಶ್ ಪೂಜಾರಿ ಹಾಗೂ ವಲಯಾಧ್ಯಕ್ಷ ಪ್ರಕಾಶ ಶೆಟ್ಟಿ, ಲಯನ್ಸ್ ಮುಖಂಡ ಹೆಬ್ರಿ ಟಿ.ಜಿ.ಆಚಾರ್ಯ ಮಾತನಾಡಿದರು. ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಪ್ರಧಾನಿ ಡಾ.ಮನ್‌ಮೋಹನ್ ಸಿಂಗ್ ನಿಧನಕ್ಕೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೀರ ಹೆಗ್ಡೆ, ಪೇತ್ರಿ ಲಯನ್ಸ್ ಅಧ್ಯಕ್ಷ ಚಂದ್ರ ನಾಯ್ಕ, ಮುನಿಯಾಲು ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೋಪಿನಾಥ ಭಟ್, ಕೋಶಾಧಿಕಾರಿ ಅಶೋಕ್ ಎಂ.ಶೆಟ್ಟಿ, ಪದಾಧಿಕಾರಿಗಳು, ವಿವಿಧ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಭಾಗವಹಿಸಿದ್ದರು. ಮುನಿಯಾಲು ಲಯನ್ಸ್ ಕ್ಲಬ್ ಶಂಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗೋಪಿನಾಥ ಭಟ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net