More

    ಲಕ್ಷಾಂತರ ರೂ. ಮೌಲ್ಯದ ಮದ್ಯ, ಬಿಯರ್ ವಶ

    ಮೈಸೂರು: ಕಾರಿನಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಮದ್ಯ ಹಾಗೂ ಬಿಯರ್ ವಶಪಡಿಸಿಕೊಳ್ಳಲಾಗಿದೆ.

    ಎನ್.ಆರ್.ಮೊಹಲ್ಲಾದಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ.


    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ಸರಬರಾಜಿನ ಮೇಲೆ ಅಧಿಕಾರಿಗಳು ನಿಗಾ ಇರಿಸಿದ್ದು, ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಬಕಾರಿ ಅಧಿಕಾರಿಗಳು, ವಿವಿಧ ಬ್ರಾಂಡಿನ 88.560 ಲೀಟರ್ ಮದ್ಯ ಹಾಗೂ 46.920 ಲೀಟರ್ ಬಿಯರ್ ಸೇರಿದಂತೆ 8 ಲಕ್ಷ ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ.


    ಮದ್ಯ ಸಾಗಣೆ ಮಾಡುತ್ತಿದ್ದ ನಾಗರಾಜು ಹಾಗೂ ಆತನಿಗೆ ಮದ್ಯ ಪೂರೈಸಿದ ಶಂಕರ್ ಮತ್ತು ವಾಹನ ಮಾಲೀಕರ ವಿರುದ್ಧ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts