

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡನೆ ಶುರುಮಾಡಿದ್ದು, ಬಜೆಟ್ ಮಂಡನೆಗೂ ಮುನ್ನ ವಿಶೇಷ ಸಂಪುಟ ಸಭೆ ನಡೆಸಿದರು. ಇದು ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಆಗಿದ್ದು, ಲೋಕಸಭೆ ಚುನಾವಣೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿತ್ತು. ಇದರ ನಡುವೆ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ನೀಡಿದೆ.
ಇದನ್ನೂ ಓದಿ: ವಿಜಯವಾಣಿಯ ಈ ದಿನದ ಪ್ರಮುಖ ಸುದ್ದಿಗಳು- 16/02/2024
15ನೇ ಆಯವ್ಯಯಗಳ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ, ಇದೀಗ ಮದ್ಯಪ್ರಿಯರಿಗೆ ಶಾಕ್ ನೀಡಿದ್ದು, ಬಜೆಟ್ ಘೋಷಣೆಯಲ್ಲಿ ಬಿಯರ್ ದರವನ್ನು ಹೆಚ್ಚಳ ಮಾಡುವ ಬಗ್ಗೆ ತಿಳಿಸಿದ್ದಾರೆ.
ನೆರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ಪರಿಷ್ಕರಣೆ ಮಾಡಲಾಗಿದ್ದು, ಬಿಯರ್ ಸೇರಿದಂತೆ ಎಲ್ಲಾ ಬ್ರಾಂಡ್ಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.