More

    ಮದ್ಯ ಅಕ್ರಮ ಮಾರಾಟ ನಿಲ್ಲಿಸಿ

    ವಿಜಯವಾಣಿ ಸುದ್ದಿಜಾಲ ಗಂಗಾವತಿ
    ಮದ್ಯ ಅಕ್ರಮ ಮಾರಾಟ ಮತ್ತು ಮಟ್ಕಾ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸದಸ್ಯರು ನಗರದ ಗಾಂಧಿ ವೃತ್ತದಿಂದ ಶ್ರೀಕೃಷ್ಣದೇವರಾಯ ವೃತ್ತದವರೆಗೆ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಶನಿವಾರ ಮನವಿ ಸಲ್ಲಿಸಿದರು.


    ಸಮಿತಿ ಜಿಲ್ಲಾಧ್ಯಕ್ಷ ಸಿ.ಕೆ.ಮರಿಸ್ವಾಮಿ ಬರಗೂರ ಮಾತನಾಡಿ, ತಾಲೂಕಿನಲ್ಲಿ ಇಸ್ಪೀಟ್, ಮಟ್ಕಾ ಜೂಜಾಟ, ಗಾಂಜಾ ಮತ್ತು ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದೆ. ಮದ್ಯದ ಅಕ್ರಮ ಮಾರಾಟ ಎಲ್ಲೆಂದರಲ್ಲಿ ನಡೆಯುತ್ತಿದೆ. ಮರಳು ಮಾಫೀಯಾದಿಂದ ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದ್ದರೂ, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಬಡವರಿಗೆ ದೊರೆಯಬೇಕಾದ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಮೀಸಲು ಯೋಜನೆಗಳು ಸಮರ್ಪಕ ಅನುಷ್ಠಾನಗೊಳ್ಳುತ್ತಿಲ್ಲ. ದಲಿತ ಕಾಲನಿಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದ್ದು, ಅಕ್ರಮ ಚಟುವಟಿಕೆಗಳಿಂದ ದುಡಿವ ವರ್ಗದ ಮೇಲೆ ಪರಿಣಾಮ ಬೀರುತ್ತಿದೆ. ಕೋಮುಭಾವನೆ ಕೆರಳಿಸುವ ಮತ್ತು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಧಾರ್ಮಿಕ ಮುಖಂಡ ಕಲ್ಲಡ್ಕ ಪ್ರಭಾಕರನ್ನು ಬಂಧಿಸಬೇಕು. ಜಿಲ್ಲಾಡಳಿತ ಮನವಿಗೆ ಸ್ಪಂದಿಸಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಮನವಿ ಮಾಡಿದರು.


    ಪದಾಧಿಕಾರಿಗಳಾದ ಹುಲ್ಲೇಶ ಬಂಡಿ ಭೋವಿ, ಯಲ್ಲಪ್ಪ ಸಮಗಾರ, ಟಿ.ವೆಂಕಟೇಶ, ಅತ್ತಾಸಂಪಂಗಿ, ರಿಯಾಜ್, ಅರ್ೀ, ದಾವಲ್, ಸಾಗರ, ಸುಂಕಪ್ಪ ಭೋವಿ, ಹನುಮೇಶ, ಸೋಹಿಲ್, ಅಲ್ತ್ಾ ಹುಸೇನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts