More

    ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ರಾಹುಲ್, ಸೋನಿಯಾ ಬರೋದೆ ಡೌಟ್

    ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬಿಡೆಗಡೆಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್, ಪ್ರಿಯಾಂಕ ಹೆಸರು ಪಟ್ಟಿಯಲ್ಲಿದೆ.
    ಉಳಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಜಿ ಸಚಿವ ಜೈರಾಮ್ ರಮೇಶ್, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಸಚಿವರಾದ ಕೆ.ಜೆ.ಜಾರ್ಜ್, ಬಿ.ಕೆ.ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಎಚ್.ಎಂ.ರೇವಣ್ಣ, ಪಿಜಿಆರ್ ಸಿಂಧ್ಯಾ, ಬಿ.ಸೋಮಶೇಖರ್, ಜಿ.ಸಿ.ಚಂದ್ರಶೇಖರ್, ಉಮಾಶ್ರೀ, ಸೈಯದ್ ನಾಸಿರ್ ಹುಸೇನ್, ಜಮೀರ್ ಅಹ್ಮದ್, ಮಧು ಬಂಗಾರಪ್ಪ, ವಿ.ಎಸ್.ಉಗ್ರಪ್ಪ, ಎಲ್.ಹನುಮಂತಯ್ಯ, ಅಭಿಷೇಕ್ ದತ್, ಸತೀಶ್ ಜಾರಕಿಹೊಳಿ, ಪಿ.ಟಿ.ಪರಮೇಶ್ವರ ನಾಯ್ಕ, ಡಾ.ಪುಷ್ಪಾ ಅಮರನಾಥ್, ತನ್ವೀರ್ ಸೇಠ್, ಅಂಬಣ್ಣ ಅರೋಲಿಕರ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಮಯೂರ್ ಜಯಕುಮಾರ್‌ಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.
    ಸಿಎಂ, ಡಿಸಿಎಂ ಹೊರತುಪಡಿಸಿ 11 ಸಚಿವರಿಗೆ ಸ್ಟಾರ್ ಕ್ಯಾಂಪೇನರ್ ಆಗಿ ಗುರುತಿಸಿದ್ದು, ಉಳಿದ ಸಚಿವರಿಗೆ ಅವರಿಗೆ ನೀಡಲಾದ ಕ್ಷೇತ್ರದಲ್ಲಿ ಮೀಸಲಿಡಲಾಗಿದೆ.
    ಹಾಗೆಯೇ ಸ್ಟಾರ್ ಪ್ರಚಾರಕರ ಪಟ್ಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ನಾನೇ ಅದನ್ನು ಬಿಡುಗಡೆ ಮಾಡಿದ್ದೇನೆ. ರಾಹುಲ್ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ದೇಶ ಸುತ್ತ ಬೇಕಿದೆ. ಅವರಿಗೆ ಸಮಯ ಕಡಿಮೆ ಇದೆ ಹೀಗಾಗಿ ಸಮಯ ಇದ್ದರೆ ಬನ್ನಿ ಎಂದು ಆಹ್ವಾನ ನೀಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಒಂದು ದಿನ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts