ಮೈಸೂರು ಕ್ರೈಸ್ಟ್ ಕಾಲೇಜಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ

christ college
Published on

ಮೈಸೂರು: ಕ್ರೈಸ್ಟ್ ಕಾಲೇಜಿನಲ್ಲಿ ಶುಕ್ರವಾರ ಕಾಲೇಜಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಿತು.

ಸಮಾರಂಭ ಉದ್ಘಾಟಿಸಿದ ಚಿತ್ರ ನಿರ್ದೇಶಕ ಪ್ರವೀಣ್ ಕೃಪಾಕರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಜತೆಗೆ ಸಾಂಸ್ಕೃತಿಕ, ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದರು.

ನೃತ್ಯಪಟು ರಾಹುಲ್ ಎಸ್.ರಾವ್, ಪ್ರಾಂಶುಪಾಲ ರೆವರೆಂಡ್ ಫಾದರ್ ಪಿ.ಡಿ. ಬಿಜು, ಸಂಘದ ಸಂಯೋಜಕಿ ಐರಿಶ್ ಮರ್ಸಿ, ಕಾಲೇಜಿನ ಆಡಳಿತಾಧಿಕಾರಿ ರೆವರೆಂಡ್ ಫಾದರ್ ಜಿಂಟೋ ಜೋಸ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net