More

    ಸಾಹಿತ್ಯಕ್ಕಿದೆ ವ್ಯಕ್ತಿತ್ವ ರೂಪಿಸುವ ಶಕ್ತಿ

    ಸೊರಬ: ವ್ಯಕ್ತಿತ್ವ ರೂಪಿಸುವ ಶಕ್ತಿ ಸಾಹಿತ್ಯಕ್ಕೆ ಇದೆ ಎಂದು ಕನ್ನಡ ಸಾಹಿತ್ಯ-ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್.ಶಂಕರ್ ಶೇಟ್ ಹೇಳಿದರು.

    ಡಿ.ದೇವರಾಜ್ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಮ್ಮಿಕೊಂಡಿದ್ದ ಮುಂಗಾರು ಕಾವ್ಯ ಸಂಭ್ರಮದಲ್ಲಿ ಅವರು ಮಾತನಾಡಿದರು.
    ಸಾಹಿತ್ಯ ಓದುವುದರಿಂದ ಹಾಗೂ ಸಂಗೀತ ಕೇಳುವುದರಿಂದ ಬದುಕಿಗೆ, ಜೀವನಕ್ಕೆ ಸ್ಫೂರ್ತಿ ಸಿಗುತ್ತದೆ. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ಸಾಹಿತ್ಯ ಓದುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದರು.
    ಸಾಹಿತಿ ಡಾ. ಅಜಿತ್ ಹೆಗಡೆ ಹರೀಶಿ ಮಾತನಾಡಿ, ನಿರಂತರ ಓದು ಹಾಗೂ ಸೃಜನಶೀಲತೆ ಕವಿತೆ ರಚನೆಯ ಅಡಿಗಲ್ಲಾಗಿದ್ದು, ಕವಿತೆ ರಚನೆಗೆ ನಿರ್ದಿಷ್ಟ ವಸ್ತುವಿನ ಹಂಗಿಲ್ಲ. ಆದರೆ ರಚನೆಗೆ ಬಹು ಆಯಾಮಗಳಿರಬೇಕು. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಹೋರಾಟಕ್ಕೆ ಜನರನ್ನು ಸಜ್ಜುಗೊಳಿಸಲು ಕಾವ್ಯದ ಪಾತ್ರ ಪ್ರಧಾನವಾಗಿತ್ತು. ಕವಿಗಳು ಪಕ್ಷಪಾತಿ ಆಗಿರಬೇಕಾದ ಸಂದರ್ಭಗಳು ಎದುರಾದರೆ ಶೋಷಿತರ, ಅಸಹಾಯಕರ, ಮಹಿಳೆಯ ಪರವಾಗಿ ನಿಲ್ಲಬೇಕು ಎಂದರು.
    ವಿದ್ಯಾರ್ಥಿಗಳು ಸೇರಿದಂತೆ ಹಲವು ಯುವ ಕವಿಗಳು ಸ್ವರಚಿತ ಕವನ ವಾಚಿಸಿದರು. ತಹಸೀಲ್ದಾರ್ ಹುಸೇನ್ ಸರಕಾವಸ್ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ರೇವಣಪ್ಪ ಅಧ್ಯಕ್ಷತೆ ವಹಿಸಿದ್ದರು.
    ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಮಂಜುನಾಥ್, ಉದ್ರಿಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಮಹೇಶ್, ಕಸಾಪ ತಾಲೂಕು ಅಧ್ಯಕ್ಷ ಶಿವಾನಂದ ಪಾಣಿ, ವೇದಿಕೆಯ ಗೌರವಾಧ್ಯಕ್ಷ ವಿಜಯಕುಮಾರ್ ದಟ್ಟೇರ್, ನಿಲಯ ಮೇಲ್ವಿಚಾರಕಿ ಟಿ.ಎಸ್.ಪ್ರತಿಭಾ, ಕಸಾಪ ಮಾಜಿ ಅಧ್ಯಕ್ಷ ಹಾಲೇಶ್ ನವುಲೆ, ಅರ್ಥಶಾಸ್ತ್ರ ಉಪನ್ಯಾಸಕ ವೀರೇಶ್, ರೇಣುಕಮ್ಮ ಗೌಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts