ನ.29ಕ್ಕೆ ಮಂತ್ರಾಲಯದಲ್ಲಿ ಸಾಹಿತ್ಯ ಸೌರಭ

40ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ

'Sahitya Saurabha'  programme at the holy shrine of Sri Raghavendra Swamy in Mantralaya
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಪುಣ್ಯಕ್ಷೇತ್ರದಲ್ಲಿ ಸಾಹಿತ್ಯ ಸೌರಭ ಕಾರ್ಯಕ್ರಮ
Published on: 

ಬೆಂಗಳೂರು : ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ, ಈರಮ್ಮ ನಾಗರಾಜಪ್ಪ ಪ್ರತಿಷ್ಠಾನ, ಮಣ್ಣೆ ಮೋಹನ್ ಪುಸ್ತಕ ಮಾಲೆ ಹಾಗೂ ಪರಿಮಳ ಪ್ರಕಾಶನದ ವತಿಯಿಂದ ಭಾನುವಾರ (ನ. 29) ಮಂತ್ರಾಲಯದಲ್ಲಿ ರಾಷ್ಟ್ರಮಟ್ಟದ ಸಾಹಿತ್ಯ ಸೌರಭ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಳಗ್ಗೆ 9ರಿಂದ ಸಂಜೆ 6ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚು ಕೃತಿಗಳ ಲೋಕಾರ್ಪಣೆ, ಸಂಪಾದಕರ ಸಮಾವೇಶ, ಕವಿಗೋಷ್ಠಿ, ಸಾಧಕರ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಶ್ರೀ ರಾಘವೇಂದ್ರಸ್ವಾಮಿ ಮಠದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದು, ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದ ಅಧ್ಯಕ್ಷ ಮಣ್ಣೆ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಪತ್ರಿಕೆಗಳ ಸಂಪಾದಕರು, ಸಾಹಿತಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಹಿಂದೆ ಹಲವು ಸಾಹಿತಿಗಳ ಮನೆಗಳು ಮತ್ತು ಮಠಗಳಲ್ಲಿ ಸಾಹಿತ್ಯ ಸೌರಭ ಆಯೋಜಿಸಿ, ಒಂದೇ ವರ್ಷದಲ್ಲಿ 150 ಕೃತಿಗಳನ್ನು ಪ್ರಕಟಿಸಿ ಲೋಕಾರ್ಪಣೆ ಮಾಡಿರುವ ಸಂಘಟಕರು, ಈ ಬಾರಿ ಗುರುರಾಯರ ಸನ್ನಿಧಿಯಲ್ಲಿ ಸಾಹಿತ್ಯ ಸಂಭ್ರಮಕ್ಕೆ ಸಜ್ಜಾಗಿದ್ದಾರೆ.