More

    ತಾರತಮ್ಯವಿಲ್ಲದ ಸ್ವಾವಲಂಬಿ ಜೀವನ ನಡೆಸಿ

    ಶಿವಮೊಗ್ಗ: ಪುರುಷ, ಮಹಿಳೆ ಎಂಬ ತಾರತಮ್ಯವಿಲ್ಲದೆ ಎಲ್ಲರೂ ಸಮಾನರು ಎಂಬ ಸಂವೇದನಾಶೀಲ ಭಾವನೆ ಮೂಲಕ ಪ್ರತಿಯೊಬ್ಬರೂ ಸ್ವಾವಲಂಬಿ ಜೀವನ ನಡೆಸುವತ್ತ ಗಮನಹರಿಸಬೇಕಿದೆ ಎಂದು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ಅಭಿಪ್ರಾಯಪಟ್ಟರು.

    ನಗರದ ಸಿಬಿಆರ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಕಾನೂನು ಸ್ನಾತಕೋತ್ತರ ಅಧ್ಯಯನ ಕೇಂದ್ರದಿಂದ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ಪುರುಷರು ಕೂಡಾ ಅಡುಗೆ ಮನೆಯ ನಿರ್ವಹಣೆಯಲ್ಲಿ ಸ್ವಾವಲಂಬನೆ ಸಾಧಿಸಬೇಕು ಎಂದರು.
    ಮಹಿಳೆಯಿಲ್ಲದ ಪ್ರಪಂಚ ಊಹಿಸಲು ಅಸಾಧ್ಯ. ಮಹಿಳೆಯರು ಅಸ್ತಿತ್ವ ಉಳಿಸಿಕೊಳ್ಳಲು ಅನೇಕ ಹೋರಾಟಗಳನ್ನು ನಡೆಸುತ್ತಿದ್ದಾರೆ. ಸೀಮಿತ ಚೌಕಟ್ಟಿನಿಂದ ಹೊರಬಂದು ದೇಶದ ಅತ್ಯುನ್ನತ ಸ್ಥಾನವನ್ನು ಪಡೆಯುವ ಮಟ್ಟಿಗೆ ಹೆಣ್ಣು ಬದಲಾಗಿದ್ದಾಳೆ ಎಂದರು.
    ಎನ್‌ಇಎಸ್ ಅಜೀವ ಸದಸ್ಯೆ ರುಕ್ಮಿಣಿ ವೇದವ್ಯಾಸ ಮಾತನಾಡಿ, ಮಹಿಳೆ ಯಾವುದೇ ಕ್ಷೇತ್ರದಲ್ಲಾಗಲಿ ಒಲುಮೆಯಿಂದ ಸಾಧಿಸಲು ಪ್ರಯತ್ನಿಸುತ್ತಾಳೆ. ಮಹಿಳಾ ದಿನ ಅಂತಹ ಸಾಧಕರನ್ನು ನೆನಪು ಮಾಡಿಕೊಳ್ಳುವ ಕ್ಷಣ. ಸರ್ಕಾರ ಮಹಿಳಾ ಸಬಲೀಕರಣಕ್ಕೆ ಅದ್ಭುತ ವೇದಿಕೆಗಳನ್ನು ನೀಡುತ್ತಿದ್ದರೂ ಇಂದಿಗೂ ಮಹಿಳೆಯರಿಗೆ ಅಭದ್ರತೆಯ ವಾತಾವರಣವಿದೆ ಎಂದು ಹೇಳಿದರು. ಕಾನೂನು ಕಾಲೇಜಿನ ಪ್ರಾಚಾರ್ಯೆ ಡಾ.ಎ.ಅನಲ ಅಧ್ಯಕ್ಷತೆ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts