

ಕುಂದಾಪುರ: ಜೀವನದಲ್ಲಿ ಶಿಸ್ತು, ಸಂಯಮ, ಸಮರ್ಪಣಾ ಮನೋಭಾವವನ್ನು ತಮ್ಮಲ್ಲಿ ಅಳವಡಿಸಿಕೊಂಡು ಭಾವನಾತ್ಮಕ, ಪ್ರಜ್ಞಾವಂತ ನಾಗರಿಕರಾಗಿ ಬದುಕನ್ನು ಸಾಗಿಸುವಂತಾಗಬೇಕು ಎಂದು ಬೈಂದೂರಿನ ರತ್ತು ಬಾಯಿ ಜನತಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಆನಂದ ಮುದ್ದೋಡಿ ಹೇಳಿದರು.
ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿ ಕೆ.ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ್, ಹಿರಿಯ ರಸಾಯನಶಾಸ್ತ್ರ ಉಪನ್ಯಾಸಕ ರವಾಕಾಂತ ರೇವಣ್ಕರ್ ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಕೋಳಿ ನೃತ್ಯ ಖ್ಯಾತಿಯ ಅಶೋಕ್ ಪೊಳಲಿ ನೃತ್ಯ ಪ್ರದರ್ಶನ ನೀಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
ವಿದ್ಯಾರ್ಥಿನಿಯರಾದ ರಿಯಾ ಸ್ವಾಗತಿಸಿ, ಚಿರಂತನಾ ವಂದಿಸಿದರು. ದೀಕ್ಷಾ ಪೈ ಅತಿಥಿಗಳನ್ನು ಪರಿಚಯಿಸಿದರು. ಅನುಷ್ಕಾ ನಿರೂಪಿಸಿದರು.