

ತಿರುವನಂತಪುರ: ಕೇರಳ ಪೊಲೀಸರು ಹಾಗೂ ವೈದ್ಯರ ಜಂಟಿ ಪ್ರಯತ್ನದಿಂದ ಶನಿವಾರ ಹೃದಯ ಕಸಿ ಚಿಕಿತ್ಸೆಗಾಗಿ ತಿರುವನಂತಪುರದಿಂದ ಕೊಚ್ಚಿಗೆ 40 ನಿಮಿಷದಲ್ಲಿ ಹೃದಯವನ್ನು ಯಶಸ್ವಿಯಾಗಿ ಸಾಗಿಸಲಾಗಿದೆ.
ಲಾಕ್ಡೌನ್ನಿಂದಾಗಿ ಎಲ್ಲ ಜಿಲ್ಲೆಗಳ ಗಡಿ ಭಾಗಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ರಾಜ್ಯ ಪೊಲೀಸ್ ಇಲಾಖೆಯ ಹೆಲಿಕಾಪ್ಟರ್ ಅನ್ನು ಬಾಡಿಗೆ ಪಡೆದುಕೊಂಡು ಹೃದಯವನ್ನು ಸಾಗಿಸಲಾಯಿತು.
ಕೇರಳ ಪೊಲೀಸರು ಹಾಗೂ ವೈದ್ಯಕೀಯ ತಂಡದ ನೆರವಿನಿಂದ ಈ ಕಾರ್ಯ ಸಾಧ್ಯವಾಗಿದೆ. ಇದೇ ಮೊದಲ ಬಾರಿಗೆ ಕೇರಳ ಪೊಲೀಸ್ ಪ್ರಾಣ ಉಳಿಸುವ ಮಹಾನ್ ಕಾರ್ಯಕ್ಕೆ ತಮ್ಮ ಹೆಲಿಕಾಪ್ಟರ್ ಅನ್ನು ಬಾಡಿಗೆಗೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಮೊದಲು ಅಂಬುಲೆನ್ಸ್ನಲ್ಲಿ ಹೃದಯವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಬಳಿಕ ಹೆಲಿಕಾಪ್ಟರ್ ಮೂಲಕ ಕೊಚ್ಚಿಗೆ ತಲುಪಿಸಲಾಯಿತು. ಹೃದಯ ಕಸಿ ಶಸ್ತ್ರಚಿಕಿತ್ಸೆ ಶನಿವಾರವೇ ನಡೆಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.