ಬಸವನಬಾಗೇವಾಡಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಅನೇಕ ಕುಟುಂಬಗಳು ಸ್ವಾವಲಂಬಿ ಬದುಕು ಸಾಗಿಸುತ್ತಿವೆ ಎಂದು ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ವಿಶ್ವನಾಥಗೌಡ ಪಾಟೀಲ ಹೇಳಿದರು.
ತಾಲೂಕಿನ ಮನಗೂಳಿಯಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆ ಮೂಲಕ ಹಸಿದವರಿಗೆ ಅನ್ನ ನೀಡುವ ಕಾರ್ಯ ಮಾಡಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿಗಳಿಂದ ಮಹಿಳೆಯರ ಬದುಕಿಗೆ ಆಸರೆಯಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶಿವನಗೌಡ ಗುಜ್ಜುಗೊಂಡ, ಪ.ಪಂ. ಸದಸ್ಯರಾದ ಭಾಗ್ಯರಾಜ ಸೊನ್ನದ, ಸಲೀಂ ನಾಗಠಾಣ, ತಾ.ಪಂ. ಇ.ಒ. ಪ್ರಕಾಶ ದೇಸಾಯಿ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಮೈಬೂಬ್ ನಾಯ್ಕೋಡಿ, ಸದಸ್ಯರಾದ ಮಹಾಂತೇಶ ತಳೆವಾಡ, ಶಂಕರ ಚಕ್ರಮನಿ, ಮಲ್ಲನಗೌಡ ಕೋಳೂರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.