More

    ಮಾಸ್ಕ್ ಧರಿಸುವುದನ್ನು ರೂಢಿಸಿಕೊಳ್ಳಿ

    ಯಾದಗಿರಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡುವುದು ಹಾಗೂ ಸೋಪು ಅಥವಾ ಸ್ಯಾನಿಟೈಸರ್ನಿಂದ ಆಗಾಗ್ಗೆ ಕೈ ತೊಳೆದುಕೊಳ್ಳುವುದನ್ನು ದಿನನಿತ್ಯದ ರೂಢಿಯಾಗಬೇಕು. ಈ ಮೂರು ಸೂತ್ರಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ಜಿಲ್ಲೆ ಕರೊನಾ ಮುಕ್ತವಾಗುವುದರಲ್ಲಿ ಸಂದೇಹವಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಹೇಳಿದರು.

    ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ಮುಕ್ತ ಜಿಲ್ಲೆಯಾಗಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಸಲಹೆ ಸೂಚನೆಗಳನ್ನು ಆಲಿಸಲು ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಸ್ಕ್ ಧರಿಸುವ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರ ನೀಡಲಾಗುತ್ತಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಪಂ ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ತಿಳಿವಳಿಕೆ ಇದ್ದರೂ ಹೆಚ್ಚಿನ ಜನರು ಮಾಸ್ಕ್ ಧರಿಸುತ್ತಿಲ್ಲ. ಅಗತ್ಯ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಬಟ್ಟೆಯಿಂದ ತಯಾರಿಸಿದ ಮಾಸ್ಕ್ ಕೂಡ ಧರಿಸಬಹುದಾಗಿದೆ. ಕರವಸ್ತ್ರ ಅಥವಾ ಇನ್ಯಾವುದೇ ವಸ್ತ್ರವನ್ನೂ ಮುಖಕ್ಕೆ ಕಟ್ಟಿಕೊಳ್ಳಬಹುದು ಎಂದು ಸಲಹೆ ನೀಡಿದರು.

    ಜಿಲ್ಲೆಯ ವಿವಿಧ ಗ್ರಾಮ, ನಗರ, ಪಟ್ಟಣಗಳಿಂದ ಬಂದ ಹತ್ತಾರು ಕರೆಗಳನ್ನು ಸ್ವೀಕರಿಸಿದ ಡಿಸಿ ಕೂಮರ್ಾರಾವ್, ಆರೋಗ್ಯ ಕೇಂದ್ರಕ್ಕೆ ವೈದ್ಯರು ಸಮಯಕ್ಕೆ ರಿಯಾಗಿ ಬರದಿರುವುದು, ಗುಟ್ಖಾ ಸೇವನೆಗೆ ಕಡಿವಾಣ, ಮಾಸ್ಕ್ ಧರಿಸುವ ಬಗ್ಗೆ ಹೆಚ್ಚಿನ ಪ್ರಚಾರ ಮತ್ತು ದಂಡ ವಿಧಿಸುವುದು ಸೇರಿ ವಿವಿಧ ವಿಷಯಗಳ ಬಗ್ಗೆ ತಿಳಿದುಕೊಂಡು ಸಕಾರಾತ್ಮಕವಾಗಿ ಸ್ಪಂದಿಸಿದರು.

    ಕೋವಿಡ್-19 ರೋಗ ಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮು, ಉಸಿರಾಟ ತೊಂದರೆ ಕಾಣಿಸಿದ್ದಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಆಶಾ ಕಾರ್ಯಕತರ್ೆಯರಿಗೆ ಮಾಹಿತಿ ನೀಡಬೇಕು ಅಥವಾ ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಕಂಟ್ರೋಲ್ ರೂಮ್ 08473-253950, ವಾಟ್ಸ್ಆ್ಯಪ್: 94499 33946 ಅಥವಾ 104 ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಎಸ್. ಪಾಟೀಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts