More

    ಜಾನುವಾರು ಚಿಕಿತ್ಸೆ ನಿರ್ಲಕ್ಷಿಸಿದರೆ ಕ್ರಮ

    ಬೆಳಗಾವಿ: ಜಾನುವಾರುಗಳ ರಕ್ಷಣೆಗಳಿಗೆ ಈಗಾಗಲೇ ಸರ್ಕಾರದಿಂದ ಪ್ರತಿ ಜಿಲ್ಲೆಗೂ ಆ್ಯಂಬುಲೆನ್ಸ್ ನೀಡಲಾಗಿದೆ. ಜಾನುವಾರುಗಳ ಚಿಕಿತ್ಸೆ ನಿರ್ಲಕ್ಷಿಸಿದರೆ ಪಶುವೈದ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಎಚ್ಚರಿಕೆ ನೀಡಿದ್ದಾರೆ.

    ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಕರೊನಾ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ರೈತರ ಹಸು, ಎಮ್ಮೆ, ಆಡು, ಕುರಿಗಳ ರಕ್ಷಣೆಗೆ ಆದ್ಯತೆ ನೀಡಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಥಣಿ ತಾಲೂಕಿನಲ್ಲಿ ಪಶುವೈದ್ಯಕೀಯ ಕಾಲೇಜು ಸ್ಥಾಪನೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಪಶು ಅಧಿಕಾರಿಗಳು ರೈತರ ಜತೆ ನಿರಂತರ ಸಂಪರ್ಕದಲ್ಲಿರಬೇಕು. ಶಿಬಿರ ಆಯೋಜಿಸುವ ಮೂಲಕ ಜಾನುವಾರುಗಳ ಆರೋಗ್ಯ ತಪಾಸಣೆ ಕೈಗೊಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಅಶೋಕ ಕೊಳ್ಳ, ಮತ್ತಿತರ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts