More

    ರಾಜ್ಯ ಬಜೆಟ್: ರೈತರಿಗೆ ಬಡ್ಡಿ ರಹಿತ ಸಾಲ ಮಿತಿ ಹೆಚ್ಚಳ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾವು ಮಂಡಿಸಿರುವ ಎರಡನೇ ಬಜೆಟ್‌ನಲ್ಲಿ ಕೃಷಿ, ವಿದ್ಯಾಭ್ಯಾಸ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು ಈ ಬಾರಿ ರೈತರಿಗೆ 5 ಲಕ್ಷ ರೂ.ವರಗೆ ಬಡ್ಡಿರಹಿತ ಸಾಲ ಪಡೆಯುವ ಅವಕಾಶವನ್ನು ನೀಡಲಾಗಿದೆ. ಈ ಮಿತಿ ಹಿಂದೆ 3 ಲಕ್ಷ ರೂ. ತನಕ ಇತ್ತು. ಅದನ್ನೀಗ ಹೆಚ್ಚಿಸಲಾಗಿದೆ.

    ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾಗುತ್ತದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸಲಾಗುವುದು.

    ಇದರೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ’ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts