26.8 C
Bangalore
Friday, December 13, 2019

ಋಣಮುಕ್ತ ಪತ್ರ ವಿತರಣೆ ಇಂದು

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಬಾಗಲಕೋಟೆ:ನಾಡಿನ ದೊರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಸೋಮವಾರವಷ್ಟೆ ಬಾಗಲಕೋಟೆಯ ತೋವಿವಿ ಮೇಳಕ್ಕೆ ಆಗಮಿಸಿ ಅನ್ನದಾತರಲ್ಲಿ ವಿಶ್ವಾಸ ತುಂಬಿದ್ದರು. ಇದೀಗ ಐದು ದಿನಗಳ ಅಂತರದಲ್ಲಿ ಮತ್ತೊಮ್ಮೆ ಶುಕ್ರವಾರ ಕೋಟೆನಾಡಿಗೆ ಭೇಟಿ ನೀಡುತ್ತಿದ್ದಾರೆ.

ರಾಜ್ಯ ಸಮ್ಮಿಶ್ರ ಸರ್ಕಾರ ಮಹತ್ವಾಕಾಂಕ್ಷಿ ರೈತರ ಬೆಳೆ ಸಾಲಮನ್ನಾ ಯೋಜನೆ ಅಡಿ ಅನ್ನದಾತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಣೆ ಮಾಡಲು ಆಗಮಿಸುತ್ತಿದ್ದಾರೆ. ನವನಗರದ ಕಲಾಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಮನ್ನಾ ಆಗಿರುವ ಜಿಲ್ಲೆಯ 2796 ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಣೆಗೆ ಸಿಎಂ ಚಾಲನೆ ಕೊಡಲಿದ್ದಾರೆ. ಸಾಂಕೇತಿಕವಾಗಿ ಜಿಲ್ಲೆಯ ಪ್ರತಿ ತಾಲೂಕಿನ 10 ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ನೀಡಲಿದ್ದಾರೆ.

ಎಷ್ಟಿದೆ ಸಾಲ ಎಷ್ಟು ರೈತರ ಸಾಲಮನ್ನಾ?: ಜಿಲ್ಲೆಯಲ್ಲಿ 254 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ 1,40,732 ರೈತರ 834.98 ಕೋಟಿ ರೂ. ಬೆಳೆ ಹೊರಬಾಕಿ ಇದೆ. 2018 ಜುಲೈ 10ಕ್ಕೆ ಒಂದು ಕುಟುಂಬಕ್ಕೆ ಗರಿಷ್ಠ 1 ಲಕ್ಷ ರೂ. ಸಾಲ ಮನ್ನಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದ ಅನ್ವಯ ಜಿಲ್ಲೆಯ 254 ಪಿಕೆಪಿಎಸ್​ಗಳ ಮತ್ತು 3 ಪಿಕಾರ್ಡ್ ಬ್ಯಾಂಕ್ ಸೇರಿ ಒಟ್ಟು 140732 ರೈತರಿಗೆ 759.98 ಕೋಟಿ ರೂ.ಸಾಲ ಮನ್ನಾ ಯೋಜನೆ ಲಾಭ ದೊರೆ ಯಲಿದೆ. ಮೊದಲ ಹಂತದಲ್ಲಿ ನವೆಂಬರ್ 2018 ವರೆಗೆ ಬಾಕಿ ಇರುವ 11680 ರೈತರ ಪೈಕಿ ದಾಖಲೆಗಳು ಹೊಂದಾಣಿಕೆಯಾಗಿರುವ 2796 ರೈತರಿಗೆ 17.54 ಕೋಟಿ ರೂ. ಹಣ ಈಗಾಗಲೇ ರೈತರ ಖಾತೆಗೆ ಜಮಾ ಮಾಡಲಾಗಿದೆ. ಸಾಲ ಮನ್ನಾ ಹಣ ತಲುಪಿರುವ ಈ ಎಲ್ಲ ರೈತರಿಗೆ ಋಣಪ್ರಮಾಣ ಪತ್ರ ವಿತರಣೆ ಮಾಡಲಾಗುತ್ತದೆ.

ಜಿಲ್ಲೆಯ ಎಷ್ಟು ರೈತರಿಗೆ ಅನ್ವಯ: 69,742 ಮಧ್ಯಮ, 75,345 ಸಣ್ಣ ರೈತರು, 82,644 ಇತರೆ ಸೇರಿ ಕೋಟೆ ನಾಡಿನಲ್ಲಿ 2,27,731 ರೈತರು ಇದ್ದಾರೆ. ಇದರಲ್ಲಿ 1,40,447 ರೈತರು ಪಿಕೆಪಿಎಸ್, ಡಿಸಿಸಿ ಬ್ಯಾಂಕ್ ಮೂಲಕ ಸಾಲ ಪಡೆದುಕೊಂಡಿದ್ದು, ಇವರೆಲ್ಲರೂ ಸಾಲ ಮನ್ನಾ ಅಡಿ ಬರಲಿದ್ದಾರೆ. ಜಿಲ್ಲೆಯಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕ್​ಗಳಲ್ಲಿ 1,05,982 (ಅಂದಾಜು) ರೈತರು 2,391 ಕೋಟಿ ಸಾಲ ಪಡೆದಿದ್ದು, ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ.

ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ: ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಸಚಿವರಾದ ಬಂಡೆಪ್ಪ ಕಾಶೆಂಪುರ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಸಾ.ರಾ.ಮಹೇಶ ಪಾಲ್ಗೊಳ್ಳುವರು. ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ದೊಡ್ಡನಗೌಡ ಪಾಟೀಲ, ಆನಂದ ನ್ಯಾಮಗೌಡ, ವಿಪ ಸದಸ್ಯರಾದ ಎಸ್.ಆರ್.ಪಾಟೀಲ, ಅರುಣ ಶಹಾಪುರ, ಹನುಮಂತ ನಿರಾಣಿ ಆಗಮಿಸಲಿದ್ದಾರೆ.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....