17.8 C
Bengaluru
Wednesday, January 22, 2020

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಿದೆ. ತನ್ಮೂಲಕ ಬ್ಯಾಂಕ್​ನಿಂದ ಸಾಲ ಪಡೆದು, ನಾನಾ ಕಾರಣಗಳಿಂದ ಅದನ್ನು ಸಕಾಲದಲ್ಲಿ ಮರುಪಾವತಿಸಲಾಗದ ಗ್ರಾಹಕರಿಗೆ ಸಾಲ ಮರುಪಾವತಿಗೆ ಉತ್ತಮ ಅವಕಾಶ ಕಲ್ಪಿಸಿದೆ. ಈ ರೀತಿಯಾಗಿ ಅದು ಅನುತ್ಪಾದಕ ಸಾಲದ ಬಾಬ್ತು (ಎನ್​ಪಿಎ) ಪ್ರಮಾಣವನ್ನು ಕಡಿಮೆ ಮಾಡಲು ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಂಡಿಕೇಟ್ ಬ್ಯಾಂಕ್​ನ ಎಂಡಿ ಮತ್ತು ಸಿಇಒ ಮೃತ್ಯುಂಜಯ ಮಹೋಪಾತ್ರಾ, ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಎಂಎಸ್​ಎಂಇಗಳ ಕೊಡುಗೆ ಅಪಾರವಾಗಿದೆ. ಆದರೆ, ಕೆಲ ಅನಿರೀಕ್ಷಿತ ಸಮಸ್ಯೆಗಳಿಂದಾಗಿ ಕಷ್ಟಕ್ಕೆ ಸಿಲುಕಿಕೊಂಡಿರುವ ಅವುಗಳ ಮಾಲೀಕರಿಗೆ ಸಾಲ ಮರುಪಾವತಿಸಲಾಗದೆ ಪರದಾಡುವ ಸ್ಥಿತಿ ನಿರ್ವಣವಾಗಿದೆ. ಅವರ ಈ ಕಷ್ಟವನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಹಾಗಾಗಿ ಎಂಎಸ್​ಎಂಇ ಸಾಲದ ವಿನ್ಯಾಸವನ್ನು ಪರಿಷ್ಕರಿಸಿ, ಸಾಲ ತೀರುವಳಿಗೆ ಹೆಚ್ಚಿನ ಸಮಯಾವಕಾಶ ಕಲ್ಪಿಸಿಕೊಟ್ಟು ಅವರಿಗೆ ಅಗತ್ಯ ಬೆಂಬಲ ನೀಡಲು ಮುಂದಾಗಿದ್ದೇವೆ ಎಂದರು.

ಎಂಎಸ್​ಎಂಇ ಸಾಲದ ವಿನ್ಯಾಸದ ಪರಿಷ್ಕರಣೆ ಕುರಿತು ವಿವರಿಸಿದ ಅವರು, ಸಾಲ ಮರುಪಾವತಿ ಅವಧಿ ಹೆಚ್ಚಳ, ಸಾಲ ಮರುಪಾವತಿ ರಜೆ ನೀಡುವ ಮೂಲಕ ವ್ಯವಹಾರದ ಒತ್ತಡ ಕಡಿಮೆ ಮಾಡುವುದು, ಸಂಕಷ್ಟ ನಿವಾರಣೆಗಾಗಿ ಹೆಚ್ಚುವರಿ ಆರ್ಥಿಕ ನೆರವು ಒದಗಿಸುವುದು, ಕಾರ್ಯಾಚರಣೆ ಬಂಡವಾಳ (ರ್ವಂಗ್ ಕ್ಯಾಪಿಟಲ್) ಸಾಲವನ್ನು ಅವಧಿ ಸಾಲವಾಗಿ ಪರಿವರ್ತಿಸುವುದು ಸೇರಿ ಅನೇಕ ಸೌಲಭ್ಯಗಳನ್ನು ಅವರಿಗೆ ಕೊಡಲಾಗುವುದು ಎಂದು ಹೇಳಿದರು.

25 ಕೋಟಿ ರೂ.ಗಿಂತ ಕಡಿಮೆ ಮೊತ್ತಕ್ಕೆ ಅನ್ವಯ: ಜಿಎಸ್​ಟಿಯಿಂದ ವಿನಾಯಿತಿ ಪಡೆದ ಎಂಎಸ್​ಎಂಇಗಳನ್ನು ಹೊರತುಪಡಿಸಿ ಜಿಎಸ್​ಟಿ ನೋಂದಣಿ ಹೊಂದಿರುವ ಮಾಲೀಕರ ಸಾಲ 2019ರ ಜ.1ಕ್ಕೆ 25 ಕೋಟಿ ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಎಂಎಸ್​ಎಂಇ ಸಾಲ ವಿನ್ಯಾಸ ಪರಿಷ್ಕರಣೆಯ ವ್ಯಾಪ್ತಿಗೆ ಬರುತ್ತಾರೆ. ಅವರೆಲ್ಲರೂ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ ಎಂದು ಮೃತ್ಯುಂಜಯ ಮಹೋಪಾತ್ರ ತಿಳಿಸಿದರು. ಹೆಚ್ಚಿನ ಮಾಹಿತಿಗೆ ಸಾಲ ಪಡೆದ ಬ್ಯಾಂಕ್ ಶಾಖೆಯನ್ನು ಸಂರ್ಪಸುವಂತೆ ಸೂಚಿಸಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...