More

    ಸಾಲಮನ್ನಾ ಗೊಂದಲ ನಿವಾರಿಸಿ

    ಶಿರಸಿ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ಬೆಂಗಳೂರಿನ ಕಚೇರಿಯಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಸಭೆ ನಡೆಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ರೈತರ ಒಂದು ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಕುರಿತ ಗೊಂದಲಗಳನ್ನು ನಿವಾರಿಸುವಂತೆ ಸೂಚಿಸಿದರು.

    ಸಹಕಾರ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಜಿಪಿಎ, ಆರ್​ಟಿಸಿ, ಆದಾಯ ತೆರಿಗೆ ಇತ್ಯಾದಿ ವಿಷಯಗಳಲ್ಲಿ ಇರುವ ಗೊಂದಲಗಳ ನಿವಾರಣೆ ಕುರಿತಂತೆ ಸುದೀರ್ಘವಾಗಿ ಅಧಿಕಾರಿಗಳೊಂದಿಗೆ ರ್ಚಚಿಸಿ ಪರಿಹಾರ ಕ್ರಮಗಳನ್ನು ತಿಳಿಸಿದರು.

    ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ರ್ಚಚಿಸಿದ ಕಾಗೇರಿ, ಸಾಲಮನ್ನಾ ವಿಷಯದಲ್ಲಿರುವ ಗೊಂದಲಗಳಿಗೆ ತ್ವರಿತವಾಗಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಬೆಳೆವಿಮೆ ಪರಿಹಾರ ಹಣ ಎಲ್ಲರಿಗೂ ತಲುಪಲು ಉಂಟಾಗುತ್ತಿರುವ ಗೊಂದಲಗಳ ನಿವಾರಣೆ ಬಗ್ಗೆ ರ್ಚಚಿಸಿದರು. ಅಗತ್ಯ ಹಣಕಾಸಿನ ಬಿಡುಗಡೆ ಕುರಿತಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಇನ್ಶೂರನ್ಸ್ ಕಂಪನಿಯಿಂದ ರೈತರಿಗೆ ಸಿಗಬೇಕಾದ ಪರಿಹಾರದ ಕುರಿತಂತೆ ಚರ್ಚೆ ನಡೆಸಿದ್ದಾಗಿ ತಿಳಿಸಲಾಗಿದೆ.

    ಸಭೆಯಲ್ಲಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ, ಸಹಕಾರ ಸಂಘದ ನಿಬಂಧಕ ಪ್ರಸನ್ನಕುಮಾರ, ಕೃಷಿ ಇಲಾಖೆಯ ನಿರ್ದೇಶಕ ಶ್ರೀನಿವಾಸ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಕೀಲ್ ಅಹಮದ್ ಹಾಗೂ ಡಿಸಿಸಿ ಬ್ಯಾಂಕ್ ಶಿರಸಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪಿ. ಚವ್ಹಾಣ, ಉತ್ತರ ಕನ್ನಡ ಜಿಲ್ಲೆಯ ವಿವಿಧ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts