More

  ದೇವಾಲಯಕ್ಕೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾದ ಪುರಸಭೆ; ಬ್ಯಾರಿಕೇಡ್​ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು!

  ಉತ್ತರಕನ್ನಡ: ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಪುರಸಭೆ ಕಟ್ಟಡ ಕಾಮಗಾರಿಗೆ ಮುಂದಾಗಿತ್ತು. ಈ ವಿಚಾರವಾಗಿ ಹಳಿಯಾಳ ಜನತೆಯಿಂದ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ಪಟ್ಟಣವನ್ನೇ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.

  ಈ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ನಡೆದಿದ್ದು ಸ್ಥಳೀಯ ಪುರಸಭೆ ದೇವಾಲಯಕ್ಕೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಈ ಬಗ್ಗೆ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳು ದೇವಸ್ಥಾನಕ್ಕೆ ಸೇರಿದ್ದ ಜಾಗವನ್ನ ಹಳಿಯಾಳ ಪುರಸಭೆಯಿಂದ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಹಳಿಯಾಳ ಪಟ್ಟಣದ ಶಕ್ತಿದೇವತೆ ಗ್ರಾಮದೇವಿಗೆ ಸೇರಿದ್ದ ಜಾಗದಲ್ಲಿ ಕಾಮಗಾರಿ ನಡೆಸದಂತೆ ವಿರೋಧಿಸಿ ಗ್ರಾಮದೇವಿ ಟ್ರಸ್ಟ್ ಅಧ್ಯಕ್ಷ ಮಂಗೇಶ ದೇಶಪಾಂಡೆ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ.

  ದೇವಾಲಯಕ್ಕೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾದ ಪುರಸಭೆ; ಬ್ಯಾರಿಕೇಡ್​ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು!

  ಪ್ರತಿಭಟನೆ ಹಿನ್ನೆಲೆಯಲ್ಲಿ ಹಳಿಯಾಳದ ಈದ್ಗಾ ಮೈದಾನಕ್ಕೆ ಹಿಂದೂ ಕಾರ್ಯಕರ್ತರು ನುಗ್ಗಿದ್ದು ಮೈದಾನದ ಬಳಿ ಪುರಸಭೆಯಿಂದ ನೆಲಕ್ಕೆ ಅಳವಡಿಸಿದ್ದ ಸಿಮೆಂಟ್ ಬ್ಲಾಕ್ ಕಿತ್ತಿದ್ದಾರೆ. ಈ ಈದ್ಗಾ ಮೈದಾನಕ್ಕೆ ತಾಗಿಕೊಂಡೇ ಗ್ರಾಮದೇವಿಯ ದೇವಸ್ಥಾನ ಕೂಡ ಇದ್ದು ಪ್ರತಿಭಟನೆ ನಡೆಸಲಾಗುತ್ತಿದೆ.

  ದೇವಾಲಯಕ್ಕೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾದ ಪುರಸಭೆ; ಬ್ಯಾರಿಕೇಡ್​ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು!

  ಪೊಲೀಸರು ಹಾಗೂ ಪ್ರತಿಭಟನಾ ನಿರತ ಹಿಂದೂ ಕಾರ್ಯಕರ್ತರ ನಡುವೆ ನೂಕು ನುಗ್ಗಲು ಉಂಟಾಗಿದ್ದು ಪ್ರತಿಭಟನಾಕಾರರು ಬ್ಯಾರಿಕೇಡ್ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts