More

    ಅವಧಿ ಮುಗಿದಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ

    ಬೆಂಗಳೂರು:
    ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನದ ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
    ಸದಸ್ಯ ಎಂ.ಎಲ್ ಅನೀಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವಿರುವ ಕಾರಣ ಅವಧಿ ಮುಗಿದಿರುವ 2ನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂರು.
    ಆಡಳಿತಾಧಿಕಾರಿ ನೇಮಿಸಿರುವುದರಿಂದ ಅಭಿವೃದ್ಧಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎನ್ನುವ ವಿವರಣೆಗೆ ಸಮಾಧಾನವಾಗದ ಸದಸ್ಯರು ಉತ್ತರ ಸಮರ್ಪಕವಾಗಿಲ್ಲ ಇದನ್ನ ಅರ್ಧಗಂಟೆ ಚರ್ಚೆಗೆ ಕೊಡುವಂತೆ ಒತ್ತಾಯಿಸಿದರು.
    ಮುಖ್ಯ ಸಚೇತಕ ಸಲೀಂ ಅಹಮದ್ ಮಾತನಾಡಿ, ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಚರ್ಚೆ ಮಾಡುವುದು ಸರಿಯಲ್ಲ ಎಂದರು.
    ಹಿರಿಯ ಸದಸ್ಯ ಬಿ ಕೆ ಹರಿಪ್ರಸಾದ್ ಮಾತನಾಡಿ, ಅವಧಿ ಮುಗಿದು 6 ತಿಂಗಳೊಳಗೆ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಆಗಬೇಕು. ಅರ್ಧ ಗಂಟೆಗೆ ಚರ್ಚೆಗೆ ಅವಕಾಶ ಕೊಡಿ ಎಂದು ಮನವಿ ಮಾಡಿದ ಬಳಿಕ ಅದಕ್ಕೆ ಒಪ್ಪಿ ಅರ್ಧಗಂಟೆ ಚರ್ಚೆಗೆ ಅವಕಾಶ ಮಾಡಿಕೊಡುವ ನಿರ್ಧಾರವನ್ನು ಉಪಸಭಾಪತಿ ಪ್ರಕಟಿಸಿದ್ದರಿಂದ ಚರ್ಚೆಗೆತೆರೆ ಬಿತ್ತು.

    ಗದಗ ಬೇಟಗೇರಿ ಅವಳಿ ನಗರಕ್ಕೆ
    ನೀರಿನ ಸಮಸ್ಯೆಗೆ ಸರ್ಕಾರದ ಸ್ಪಂದನೆ
    ಗದಗ ಬೇಟಗೇರಿ ಅವಳಿ ನಗರಕ್ಕೆ 15 ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದೆ ಎಂದು ಮೇಲ್ಮನೆಯಲ್ಲಿ ಬಿಜೆಪಿಯ ಎಸ್.ವಿ.ಸಂಕನೂರು ಗಮನಸೆಳೆದರು. ಅದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕುಡಿಯುವ ನೀರನ್ನ ಒದಗಿಸದ ಸರ್ಕಾರ ಸರ್ಕಾರವೇ ಎನಿಸಿಕೊಳ್ಳುವುದಿಲ್ಲ. ಈ ಸಮಸ್ಯೆ ಹಿಂದಿನ ಬಿಜೆಪಿ ಅವಧಿಯಲ್ಲಾಗಿತ್ತು, ಆದರೆ ನಾವು ಕೂಡಲೇ ಸಮಸ್ಯೆಯನ್ನ ಪರಿಹರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.
    ಎನ್‌ಕೆಯುಎಸ್‌ಐ ಪಿ ಯೋಜನೆಯಲ್ಲಿ ಸಾಕಷ್ಟು ಅವ್ಯವಹಾರ ಆರೋಪ ಕೇಳಿಬಂದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆಗೂ ನೀಡಲು ಕ್ರಮ ಕೈಗೊಳ್ಳುತ್ತೇವೆ. ಆದಷ್ಟು ಬೇಗ ನೀರಿನ ಸಮಸ್ಯೆ ನೀಗಲಿದೆ ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts