ಸ್ಥಳೀಯ ಸಂಸ್ಥೆಯ ಸದಸ್ಯರ ಹೆಗಲಿಗೆ ಗೆಲುವಿನ ಜವಾಬ್ದಾರಿ!

| ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಗೆಲುವಿಗೆ ನಾನಾ ಕಸರತ್ತು ನಡೆಸುತ್ತಿರುವ ರಾಜಕೀಯ ಪಕ್ಷದ ನಾಯಕರು ಇದೀಗ ಸ್ಥಳೀಯ ಸಂಸ್ಥೆಗಳ ಸದಸ್ಯರ ಹೆಗಲಿಗೆ ಅಭ್ಯರ್ಥಿಗಳ ಗೆಲುವಿನ ಜವಾಬ್ದಾರಿ ವಹಿಸಲು ಮುಂದಾಗಿದ್ದಾರೆ..!

ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ ಮತ್ತು ಕೆನರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹಾನಗರ ಪಾಲಿಕೆ,ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿಯ 380 ಸದಸ್ಯರು, ಜಿಪಂ ಕ್ಷೇತ್ರದ 90 ಸದಸ್ಯರು,193 ತಾಪಂ ಕ್ಷೇತ್ರಗಳಲ್ಲಿ 339 ಸದಸ್ಯರು ಹಾಗೂ 505 ಗ್ರಾಪಂಗಳ 8482 ಸದಸ್ಯರಿಗೆ ಅಭ್ಯರ್ಥಿಗಳ ಗೆಲ್ಲಿಸುವ ಜವಾಬ್ದಾರಿಯನ್ನು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರು ವಹಿಸಿದ್ದಾರೆ. ಮತ್ತೊಂದೆಡೆ ವಾರ್ಡ್‌ಗಳಲ್ಲಿನ ಮತಗಳ ವಿಭಜನೆಯಾಗದಂತೆ ಸದಸ್ಯರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿತ್ತು. ಇದರಿಂದ ಮತ ಗಳಿಕೆ ಪ್ರಮಾಣ ಹೆಚ್ಚಿತ್ತು. ಅಷ್ಟೇ ಅಲ್ಲದೆ ಶಾಸಕರು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಮಾದರಿಯಲ್ಲಿ ಲೋಕಸಭಾ ಚುನಾವಣೆಯ ಜವಾಬ್ದಾರಿಯನ್ನು ಸದಸ್ಯರಿಗೆ ವಹಿಸಲು ಶಾಸಕರು, ಪಕ್ಷದ ನಾಯಕರು ನಿರ್ಧರಿಸಿ ಪ್ರತ್ಯೇಕ ಸಭೆಗಳನ್ನು ಆಯೋಜನೆ ಮಾಡುತ್ತಿದ್ದಾರೆ.

ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸದಸ್ಯರು ತಮ್ಮ ಚುನಾವಣೆಯಲ್ಲಿ ಪಡೆದುಕೊಂಡಿರುವ ಮತಗಳನ್ನು ಲೋಕಸಭೆಯ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಹಾಕಿಸಬೇಕು. ಈ ಸಂಬಂಧ ಆ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ಪ್ರಚಾರ ನಡೆಸಬೇಕು. ಜತೆಗೆ ತಮ್ಮ ವಾರ್ಡ್‌ನಲ್ಲಿ ಮತಗಳ ವಿಭಜನೆಯಾಗದಂತೆ ನೋಡಿಕೊಳ್ಳಬೇಕು. ಇವುಗಳ ಉಸ್ತುವಾರಿಯನ್ನು ಆಯಾ ರಾಜಕೀಯ ಪಕ್ಷಗಳ ಸ್ಥಳೀಯ ಮುಖಂಡರು ವಹಿಸಿಕೊಂಡಿದ್ದಾರೆ. ಈಗಾಗಲೇ ಈ ವಾರ್ಡ್‌ನಲ್ಲಿ ಒಂದು ಪಕ್ಷಕ್ಕೆ ಇಷ್ಟು ಮತಗಳು ಬೀಳಲಿವೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿದ್ದಾರೆ.

ನಾಮಬಲದ ಮೇಲೆ ಅವಲಂಬನೆ: ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ ಮತ್ತು ಕೆನರಾ ಲೋಕಸಭಾ ಕ್ಷೇತ್ರದಲ್ಲಿನ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರ ನಾಮಬಲದ ಆಧಾರದ ಮೇಲೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.ಬಿಜೆಪಿ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ,ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ನೆಚ್ಚಿಕೊಂಡಿದ್ದರೆ ಕಾಂಗ್ರೆಸ್ ಅಭ್ಯರ್ಥಿಗಳು ಎಐಸಿಸಿ ಅಧ್ಯಕ್ಷ ರಾಹುಲ ಗಾಂ, ಪ್ರಿಯಾಂಕಾ ಗಾಂ, ಮಾಜಿ ಸಿಎಂ ಸಿದ್ದರಾಮಯ್ಯ ನಾಮಬಲದ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ.

ಮದ್ಯಮ ವರ್ಗಗಳ ಮೇಲುಗೈ!: ಜಿಲ್ಲೆಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 18,87,283 ಪುರುಷ, 15,48,629 ಮಹಿಳೆ, 22 ಸಾವಿರ ಅಂಗವಿಕಲರು ಹಾಗೂ ಇತರೆ 122 ಸೇರಿದಂತೆ ಒಟ್ಟು 37,22,034 ಮತದಾರರು ಇದ್ದಾರೆ. ಇದರಲ್ಲಿ ವೀರಶೈವ ಲಿಂಗಾಯರ, ಕುರುಬ ಸಮುದಾಯ ಹೊರುಪಡಿಸಿದರೆ ಅಕ ಪ್ರಮಾಣದಲ್ಲಿ ಮದ್ಯಮ ವರ್ಗದ ಮತದಾರರಿದ್ದಾರೆ. 18 ವಿಧಾನಸಭಾ ಕ್ಷೇತ್ರಗಳ ಪೈಕಿ 13 ವಿಧಾನಸಭಾ ಕ್ಷೇತ್ರಗಳಲ್ಲಿ ಅಕ ಪ್ರಮಾಣದಲ್ಲಿರುವ ಮದ್ಯದ ವರ್ಗದ ಮತಗಳೇ ನಿರ್ಣಾಯಕವಾಗಲಿವೆ ಎಂದು ಕಾಂಗ್ರೆಸ್, ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗಾಗಿ ಪಕ್ಷದ ಸ್ಥಳೀಯ ಸಂಸ್ಥೆಯ ಸದಸ್ಯರ ಪ್ರತ್ಯೇಕ ಸಭೆಗಳನ್ನು ನಡೆಸಿ ಕ್ಷೇತ್ರದಲ್ಲಿ ಸಂಪೂರ್ಣ ಜವಾಬ್ದಾರಿ ನೀಡಿದ್ದಾರೆ.
|ಗೋವಿಂದ ಕೊಪ್ಪದ, ಜಿಪಂ ಸದಸ್ಯ (ಬಿಜೆಪಿ)

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ‌್ಸುವ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು, ಸ್ಥಳೀಯ ನಾಯಕರಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಲಾಗಿದೆ.

|ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ