More

    ಪೊಲೀಸ್ ಠಾಣೆಗೆ ಕಲ್ಲು ತೂರಾಟ; ಲಾಠಿ ಪ್ರಹಾರ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಐಂತ್ರಣಕ್ಕೆ ಯತ್ನ

    ಚನ್ನಗಿರಿ: ಮಟ್ಕಾ ಜೂಜಾಟದ ಅನುಮಾನದ ಮೇಲೆ ವಿಚಾರಣೆ ನಡೆಸಲು ಕರೆತರಲಾಗಿದ್ದ ವ್ಯಕ್ತಿಯೊಬ್ಬ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾನೆ. ಪಟ್ಟಣದ ಟಿಪ್ಪುನಗರದ ನಿವಾಸಿಯಾಗಿದ್ದ ಕಾರ್ಪೆಂಟರ್ ಆದಿಲ್ (32) ಮೃತ ವ್ಯಕ್ತಿ. ಆತನನ್ನು ಬೆಳಗ್ಗೆ ಠಾಣೆಗೆ ಕರೆತರಲಾಗಿತ್ತು. ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ನಾನೇ ನಾಯಕ, ನಾನೇ ಖಳನಾಯಕ ; ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್​ವುಡ್​ ಕ್ಷೇತ್ರಪತಿ ನವೀನ್ ಶಂಕರ್​

    ಘಟನೆ ಹಿನ್ನೆಲೆಯಲ್ಲಿ ಸಂಜೆ ಚನ್ನಗಿರಿ ಠಾಣೆಯ ಮುಂದೆ ಶವವಿಟ್ಟು ಪ್ರತಿಭಟಿಸಿದ ನೂರಾರು ಜನರು ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯ ಕೊಡಿಸುವಂತೆ ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಠಾಣೆಯ ಬಳಿ ಬಿಗಿ ವಾತಾವರಣ ನಿರ್ಮಾಣವಾಗಿತ್ತು. ಮೃತ ಆದಿಲ್‌ಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.
    ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ, ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಮಟ್ಕಾ ಆಡುವ ಅನುಮಾನದ ಮೇಲೆ ಬೆಳಗ್ಗೆ 11 ಗಂಟೆಗೆ ಆದಿಲ್‌ನನ್ನು ಠಾಣೆಗೆ ಕರೆತರಲಾಯಿತು. ವಿಚಾರಣೆ ವೇಳೆ ಆತ ಭಯಗೊಂಡು ಕುಸಿದು ಬಿದ್ದ. ಕೂಡಲೇ ಠಾಣೆಯ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಗೆ ಆತ ಮೃತಪಟ್ಟಿದ್ದ ಎಂದು ವಿವರಿಸಿದರು.

    ‘ಆದಿಲ್‌ನ ಮರಣೋತ್ತರ ಪರೀಕ್ಷೆಯನ್ನು ನೀವು ಬೇರೆ ಎಲ್ಲಾದರೂ ಮಾಡಿಸಿ. ಆತನಿಗೆ ಹೊಡೆದಿದ್ದರಿಂದ ಸಾವಾಗಿದೆ ಎಂದು ಸಾಬೀತಾದರೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು. ರಾತ್ರಿ ಹೆಚ್ಚುವರಿ ಎಸ್ಪಿ ಮಂಜುನಾಥ್ ಠಾಣೆಗೆ ಭೇಟಿ ನೀಡಿದರು. ಅಷ್ಟರ ಹೊತ್ತಿಗೆ ಆಕ್ರೋಶಗೊಂಡಿದ್ದ ಜನರು ಪೊಲೀಸ್ ಠಾಣೆಗೆ ಕಲ್ಲು ತೂರಿದ್ದರಿಂದ ಕಿಟಕಿಯ ಗಾಜುಗಳು ಪುಡಿಯಾಗಿದೆ.

    ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

    ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts