ರಾಜಧಾನಿ ದೆಹಲಿಯಲ್ಲಿ ಲಾಕ್​ಡೌನ್​ ಮುಂದುವರೆಸುವ ಕುರಿತು ನಾಳೆ ಲೆಫ್ಟಿನೆಂಟ್ ಗವರ್ನರ್​ ನೇತೃತ್ವದಲ್ಲಿ ಸಭೆ

delhi april
Published on

ನವದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಲಾಕ್​ಡೌನ್​ ಮುಂದುವರೆಸುವ ಬಗ್ಗೆ ಲೆಫ್ಟಿನೆಂಟ್ ಗವರ್ನರ್​ ಅನಿಲ್​ ಬೂಜಾಲ್​ ನೇತೃತ್ವದಲ್ಲಿ ನಾಳೆ (ಏ.9ರ ಗುರುವಾರ) ನಡೆಯಲಿದೆ.

ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಪೊಲೀಸ್ ಆಯುಕ್ತ ಎಸ್​.ಎನ್​.ಶ್ರೀವತ್ಸವ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಲಾಕ್​ಡೌನ್​ ಏ.14ರ ಮಂಗಳವಾರ ಅಂತ್ಯಗೊಳ್ಳಲಿದ್ದು ಮುಂದೆ ಯಾವ ನಡೆ ಕೈಗೊಳ್ಳಬೇಕು. ಸೋಂಕು ನಿಯಂತ್ರಣ ಹೇಗಿದೆ, ಆಸ್ಪತ್ರೆಗಳ ವ್ಯವಸ್ಥೆ, ಸೋಂಕಿತರಿಗೆ ದೊರೆಯುತ್ತಿರುವ ಚಿಕಿತ್ಸೆ, ಇನ್ನಷ್ಟು ಪ್ರಯೋಗಾಲಯಗಳ ಅವಶ್ಯಕತೆ ಇದೆಯೇ ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ವಿವಿಧ ಕ್ಷೇತ್ರಗಳ ಪರಿಣತರು ಕೂಡ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಕೈಗೊಳ್ಳುವ ನಿರ್ಧಾರವನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಏ.11ರಂದು ತಿಳಿಸಲಿದ್ದಾರೆ. ನಂತರ ಲಾಕ್​ಡೌನ್​ ಮುಂದುವರೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಇಲ್ಲಿವರೆಗೆ 600 ಮಂದಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ ಬಹುತೇಕರು ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದವರು.

ಕರೋನವೈರಸ್ ಪ್ರಕರಣಗಳು ವರದಿಯಾಗಿವೆ, ಅವುಗಳಲ್ಲಿ ಹೆಚ್ಚಿನವು ತಬ್ಲಿಘಿ ಜಮಾಅತ್‌ನ ನಿಜಾಮುದ್ದೀನ್ ಪ್ರಧಾನ ಕಚೇರಿಯಲ್ಲಿರುವ ಸಭೆಗೆ ಸಂಬಂಧಿಸಿವೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net