More

    ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ನೀಡುವಂತೆ ಸಿಎಂ ಸೂಚನೆ

    ಬೆಂಗಳೂರು: ಲಾಕ್​ಡೌನ್​ ಹಿನ್ನೆಲೆಯಲ್ಲಿ ತೊಂದರೆಗೆ ಒಳಗಾಗಿರುವ ಸಾರ್ವಜನಿಕರ ನೆರವಿಗೆ ಸರ್ಕಾರ ಧಾವಿಸಿದೆ. ಪಡಿತರ ಚೀಟಿ ಇಲ್ಲದಿದ್ದರೂ ಸಾರ್ವಜನಿಕರಿಗೆ ಪಡಿತರ ವಿತರಣೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಅವರು ಸೂಚನೆ ನೀಡಿದರು.

    ಕ್​ಡೌನ್​ ಹಿನ್ನೆಲೆಯಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ತೊಂದರೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೂ ಪಡಿತರ ಒದಗಿಸಬೇಕು. ಇದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

    ರೈತರ ಉತ್ಪನ್ನ ಖರೀದಿಸಿ: ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆ ಇಲ್ಲದೆ ರಸ್ತೆಗೆ ಸುರಿಯುತ್ತಿದ್ದಾರೆ. ಈ ಬಗ್ಗೆಯೂ ಜಿಲ್ಲಾಧಿಕಾರಿಗಳು ನಿಗಾ ವಹಿಸಬೇಕು. ಜಿಲ್ಲಾಡಳಿತವೇ ಉತ್ಪನ್ನ ಖರೀದಿಸಿ ಹಾಪ್​ಕಾಮ್ಸ್​ ಮೂಲಕ ಮಾರಾಟ ಮಾಡಬೇಕು. ರೈತರ ಬಿತ್ತನೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬೆಳೆ ನಾಶವಾದರೇ ಕೂಡಲೇ ಅವರಿಗೆ ಪರಿಹಾರ ನೀಡಬೇಕು ಎಂದು ಸೂಚನೆ ನೀಡಿದರು. (ದಿಗ್ವಿಜಯ ನ್ಯೂಸ್​)

    ಸಿಂಗಾಪುರದ ಚಾಂಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​-2 ಕಾರ್ಯಾಚರಣೆ ಮೇ 1ರಿಂದ 18 ತಿಂಗಳು ಸ್ಥಗಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts