ಲಾಕ್​ಡೌನ್​: ಆಟೋ ಸೀಜ್​ ಮಾಡಿ ಠಾಣೆಗೆ ಕೊಂಡೊಯ್ಯುವಾಗ ಅಪಘಾತದ ಬೆನ್ನಲ್ಲೇ ಪೇದೆಗೆ ಹೃದಯಾಘಾತ, ಆಸ್ಪತ್ರೆಗೆ ಗೃಹಸಚಿವರ ಭೇಟಿ

blank

ಬೆಂಗಳೂರು: ಲಾಕ್​ಡೌನ್​ ವೇಳೆ ಅನಗತ್ಯವಾಗಿ ಓಡಾಡುತ್ತಿದ್ದ ಆಟೋವನ್ನು ಸೀಜ್​ ಮಾಡಿ ಪೊಲೀಸ್​ ಠಾಣೆಗೆ ಚಲಾಯಿಸಿಕೊಂಡು ಹೋಗುವಾಗ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದು ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಮ್ಮ ಠಾಣಾ ವ್ಯಾಪ್ತಿಯಲ್ಲಿ ಆಟೋ ಓಡಾಡುತ್ತಿದ್ದನ್ನು ಗಮನಿಸಿದ ಪೀಣ್ಯ ಪೊಲೀಸ್ ಠಾಣೆಯ ಪೊಲೀಸ್​ ಕಾನ್ಸ್​ಟೇಬಲ್​ ನಾಗೇಶ್, ಆಟೋವನ್ನು ತಡೆದು ವಶಪಡಿಸಿಕೊಂಡರು. ಬಳಿಕ ಪಕ್ಕದಲ್ಲೇ ಇದ್ದ ಠಾಣೆಗೆ ಚಲಾಯಿಸಿಕೊಂಡು ಹೋಗುವಾಗ ನಿಯಂತ್ರಣ ಕಳೆದುಕೊಂಡು ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆದು ತಕ್ಷಣ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ನಾಗೇಶ್​ ಅವರಿಗೆ ಹೃದಯಾಘಾತವು ಆಗಿದೆ.

ಕೂಡಲೇ ಅವರನ್ನು ಜಾಲಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಐಸಿಯುನಲ್ಲಿ ಇರಿಸಲಾಗಿದೆ.

ಆಸ್ಪತ್ರೆಗೆ ಗೃಹ ಸಚಿವರ ಭೇಟಿ
ನಾಗೇಶ್​ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು ಪೀಣ್ಯ ಮುಖ್ಯಪೇದೆ ನಾಗೇಶ್ ಕರೋನ‌ ಕರ್ತವ್ಯದ ವೇಳೆ ಅಪಘಾತಕ್ಕೀಡಾಗಿದ್ದಾರೆ. ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ‌. ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಮುಂದುವರೆದಿದೆ. ಕರೋನಾ ರೋಗ ತಡೆಗಾಗಿ ನಮ್ಮ ಇಲಾಖೆಯ ಪೊಲೀಸರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ತುಮಕೂರಿನ ಗೊರವನಹಳ್ಳಿಯ ಪೇದೆ ನಾಗೇಶ್ ಗುಣಮುಖರಾಗಿ ಬರಲಿ ಎಂದರು ಆಶಿಸಿದರು.

ಇಬ್ಬರು ಮಕ್ಕಳಿರುವ ನಾಗೇಶ್ ಮುಖ್ಯಪೇದೆಯಾಗಿ ಇಲಾಖೆಯಲ್ಲಿ ಉತ್ತಮ‌ ಹೆಸರು ಗಳಿಸಿದ್ದಾರೆ. ಕರ್ತವ್ಯದ ವೇಳೆ ಅಪಘಾತಕ್ಕೀಡಾದಾಗ ಇಲಾಖೆ ಪೊಲೀಸರ ನೆರವಿಗೆ ಧಾವಿಸುತ್ತದೆ. ಸರ್ಕಾರದಿಂದ ಸಿಗುವ ವಿಮೆ ಮತ್ತು ಭತ್ಯೆ ದೊರೆಯುತ್ತದೆ. ನಾಗೇಶ್ ಸಹ ಕರ್ತವ್ಯದ ವೇಳೆ ತೊಂದರೆಗೆ ಒಳಗಾಗಿದ್ದಾರೆ. ಸರ್ಕಾರದ ಜತೆ ಸಮಾಲೋಚನೆ ನಡೆಸಲಾಗುವುದು. ನಮ್ಮ‌ ಪೊಲೀಸರಿಗೆ ಯಾವುದೇ ತೊಂದರೆ ಆಗದಂತೆ ನಡೆದುಕೊಳ್ತೇವೆ. ಸಂಕಷ್ಟದ ಸಂದರ್ಭಗಳಲ್ಲಿ ನಾವು ನಮ್ಮ ಇಲಾಖೆಯ ಸಿಬ್ಬಂದಿಯ ಜತೆಗಿರುತ್ತೇವೆ ಎಂದು ಭರವಸೆ ನೀಡಿದರು. (ದಿಗ್ವಿಜಯ ನ್ಯೂಸ್​)

ಒಂದು ಲೋಡ್​ ಹೂ ತೆಗೆದುಕೊಂಡು ಹೋಗಿ ಸಿಎಂ ಬಿಎಸ್​ವೈಗೆ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚಿಸಿದ್ದೇಕೆ?

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…