More

    ದಕ್ಷಿಣ ಕನ್ನಡದಲ್ಲಿ ಲಾಕ್‌ಡೌನ್ ತೆರವು

    ಮಂಗಳೂರು: ರಾಜ್ಯ ಸರ್ಕಾರದ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಒಂದು ವಾರ ಜಾರಿಗೊಳಿಸಿದ ಲಾಕ್‌ಡೌನ್ ಗುರುವಾರ ಬೆಳಗ್ಗೆ 5 ಗಂಟೆಗೆ ಪೂರ್ಣಗೊಂಡಿದೆ. ಇನ್ನು ಮುಂದೆ ಲಾಕ್‌ಡೌನ್ ಇರುವುದಿಲ್ಲ. ಆದರೆ, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗಿನ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ.
    ಸರ್ಕಾರಿ, ಖಾಸಗಿ ಕಚೇರಿಗಳು ಬಾಗಿಲು ತೆರೆಯಲಿದೆ. ಆಟೋ ರಿಕ್ಷಾ, ಟ್ಯಾಕ್ಸಿ, ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಸಾರ್ವಜನಿಕರು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಬಳಕೆ ಮಾಡುವ ಮೂಲಕ ಕರೊನಾ ಸೋಂಕು ಹರಡುವುದರ ವಿರುದ್ಧ ಮುಂಜಾಗ್ರತೆ ವಹಿಸಬೇಕಾಗಿದೆ. ಭಾನುವಾರದ ಲಾಕ್‌ಡೌನ್ ಯಥಾ ಪ್ರಕಾರ ಮುಂದುವರಿಯಲಿದೆ.
    ಲಾಕ್‌ಡೌನ್‌ನ ಕೊನೆಯ ದಿನ ಬುಧವಾರ ನಗರದಲ್ಲಿ ವಾಹನಗಳ ಓಡಾಟ ಹೆಚ್ಚಾಗಿತ್ತು. ರಾಷ್ಟ್ರೀಯ ಹೆದ್ದಾರಿಗಳಲ್ಲೂ ಬೆಳಗ್ಗೆಯಿಂದ ರಾತ್ರಿ ತನಕ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ವಾಹನಗಳು ಸಂಚರಿಸಿವೆ. ನಗರದೊಳಗೆ ಬೆಳಗ್ಗೆ 11 ಗಂಟೆ ಬಳಿಕ ಪೊಲೀಸರು ತಪಾಸಣೆ ಬಿಗಿಗೊಳಿಸಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts