ಸೆ.6ರವರೆಗೂ ಲಾಕ್​ಡೌನ್​ ವಿಸ್ತರಣೆ; ನಿರ್ಬಂಧಗಳನ್ನು ಹಿಂದಿನಂತೆಯೇ ಮುಂದುವರಿಸಿದ್ದೆಲ್ಲಿ?

lockdown-web
Published on

ನವದೆಹಲಿ: ಕರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದನ್ನು ನಿಯಂತ್ರಿಸಲು ಎಲ್ಲ ರಾಜ್ಯಗಳಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಪ್ರಮುಖ ರಾಜ್ಯಗಳಲ್ಲಿ ಪರಿಸ್ಥಿತಿ ತಹಬಂಧಿಗೆ ಬರುತ್ತಿಲ್ಲ. ಅದರಲ್ಲೂ 10 ರಾಜ್ಯಗಳಲ್ಲಿ ಭಾರಿ ಹೆಚ್ಚಳವಾಗುತ್ತಿರುವುದು ಕೇಮದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಅಂತೆಯೇ ಬಿಹಾರದಲ್ಲಿ ಗೃಹ ಇಲಾಖೆ ಉನ್ನತಮಟ್ಟದ ಸಭೆ ನಡೆಸಿ ರಾಜ್ಯಾದ್ಯಂತ ಇನ್ನಷ್ಟು ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ. ಸೆಪ್ಟಂಬರ್​ 6ರ ವರೆಗೆ ಲಾಕ್​ಡೌನ್​ ಮುಂದುವರಿಸಲು ನಿರ್ಧರಿಸಿದೆ.

ಈ ಮೊದಲಿನ ಆದೇಶದಂತೆ ಆಗಸ್ಟ್​ 16ರ ವರೆಗೆ ಲಾಕ್​ಡೌನ್​ ಜಾರಿಯಲ್ಲಿತ್ತು. ಇದೀಗ ಮತ್ತೆ 21 ದಿನಗಳ ವಿಸ್ತರಣೆ ಮಾಡಲಾಗಿದೆ. ಇದರನ್ವಯ ಧಾರ್ಮಿಕ ತಾಣಗಳನ್ನು ತೆರೆಯಲು ಅವಕಾಶವಿಲ್ಲ. ಯಾವುದೇ, ಧಾರ್ಮಿಕ, ರಾಜಕೀಯ ಹಾಗೂ ಸಾಮಾಜಿಕ, ಸಾಂಸ್ಕೃತಿಕ ಸಭೆ- ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.

ವಾಣಿಜ್ಯ ಹಾಗೂ ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶವಿದೆ. ಆದರೆ, ಜಿಮ್​, ಪಾರ್ಕ್​ಗಳು ಬಂದ್​ ಇರಲಿವೆ. ಮಾಸ್ಕ್​ ಧರಿಸುವುದು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net