ಮೇ 15ರವರೆಗೆ ಲಾಕ್​ಡೌನ್​ ಘೋಷಿಸಿದ ರಾಜ್ಯ ಸರ್ಕಾರ! ಅಲ್ಲಿಯವರೆಗೆ ಎಲ್ಲ ಬಂದ್​

ಪಟನಾ: ದೇಶದಲ್ಲಿ ಕರೊನಾ ಸೋಂಕಿನ ತೀವ್ರತೆ ಹೆಚ್ಚಲಾರಂಭಿಸಿದ್ದು, ರಾಜ್ಯಗಳು ರಾಜ್ಯವ್ಯಾಪಿ ಲಾಕ್​ಡೌನ್​ ಹೋಗಲಾರಂಭಿಸಿವೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈಗಾಗಲೇ ಲಾಕ್​ಡೌನ್​ ಜಾರಿಯಲ್ಲಿದೆ. ಇದೀಗ ಬಿಹಾರದಲ್ಲಿಯೂ ಲಾಕ್​ಡೌನ್​ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಸಂಪುಟ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಅವರೆಲ್ಲರ ಸಲಹೆಯ ಆಧಾರದ ಮೇರೆಗೆ ರಾಜ್ಯದಲ್ಲಿ ಮೇ 15ರವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರದಂದು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಮಾರ್ಗಸೂಚಿ ತಯಾರಿಸಲಾಗುತ್ತಿದ್ದು, ಶೀಘ್ರವೇ ಅದನ್ನು … Continue reading ಮೇ 15ರವರೆಗೆ ಲಾಕ್​ಡೌನ್​ ಘೋಷಿಸಿದ ರಾಜ್ಯ ಸರ್ಕಾರ! ಅಲ್ಲಿಯವರೆಗೆ ಎಲ್ಲ ಬಂದ್​