More

    ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಿಂಗಳಾಂತ್ಯದವರೆಗೆ ಲಾಕ್​ಡೌನ್​ ವಿಸ್ತರಣೆ

    ಮುಂಬೈ/ಚೆನ್ನೈ: ಕರೊನಾ ಪೀಡಿತ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಮೇ ಕೊನೆಯವರೆಗೆ ಲಾಕ್​ಡೌನ್​ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಕಟ್ಟುನಿಟ್ಟಾಗಿ ಮುಂದುವರಿಯಲಿದ್ದರೆ, ತಮಿಳುನಾಡಿನಲ್ಲಿ ಲಾಕ್​ಡೌನ್​ ನಿಯಮವನ್ನು ಒಂದಷ್ಟು ಸಡಿಲಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ಮುಂಬೈ, ಪುಣೆ, ಮಾಲೇಗಾಂವ್​ ಮತ್ತು ಪಿಂಪ್ರಿ ಚಿಂಚವಾಡಾದ ಕೆಂಪು ವಲಯಗಳಲ್ಲಿ ಲಾಕ್​ಡೌನ್​ ಅನ್ನು ಕಟ್ಟುನಿಟ್ಟಾಗಿ ಮುಂದುವರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಈ ಪ್ರದೇಶಗಳಲ್ಲೇ ಅತಿಹೆಚ್ಚು ಕರೊನಾ ಸೋಂಕಿತರು ಇರುವುದು ಇದಕ್ಕೆ ಕಾರಣ. ಶನಿವಾರ ಅಥವಾ ಭಾನುವಾರ ಈ ಬಗ್ಗೆ ಅಧಿಕೃತ ಸೂಚನೆ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

    ಇದನ್ನೂ ಓದಿ: ಕ್ರೀಡಾ ಕ್ಷೇತ್ರದಲ್ಲೂ ಮುತ್ತಪ್ಪ ರೈ ಸೈ…

    ಮೇ 17ರ ನಂತರದಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತು ನಿರ್ಧರಿಸಲು ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ತಮ್ಮ ಸಚಿವ ಸಂಪುಟದ ಕೆಲ ಪ್ರಮುಖ ಸದಸ್ಯರೊಂದಿಗೆ ಗುರುವಾರ ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ಸಭೆಯ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ರವಾನಿಸಲಾಗಿದೆ.

    ತಮಿಳುನಾಡು ಸರ್ಕಾರ ರಚಿಸಿರುವ ಅಧಿಕಾರಿಗಳ ಸಮಿತಿ ಮೇ 17ರ ನಂತರದ ವಿಸ್ತೃತ ಲಾಕ್​ಡೌನ್​ ಅವಧಿಯಲ್ಲಿ ಸಡಿಲಗೊಳಿಸಬಹುದಾದ ನಿಯಮಗಳು ಮತ್ತು ಪ್ರದೇಶಗಳ ಕುರಿತು ನಿರ್ಧರಿಸಿ, ಆ ವರದಿಯನ್ನು ಸಿಎಂ ಪಳನಿಸ್ವಾಮಿ ಅವರಿಗೆ ಸಲ್ಲಿಸಿದೆ. ಜತೆಗೆ ರಾಜ್ಯದಲ್ಲಿ ಕರೊನಾ ಸೋಂಕು ಹರಡುವಿಕೆಯ ಮೇಲೆ ನಿಗಾವಹಿಸಲು ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವಂತೆ ಸಲಹೆ ನೀಡಿದೆ.

    ಇದನ್ನೂ ಓದಿ: ಅನ್ಯ ರಾಜ್ಯಗಳಲ್ಲಿರುವ ಕನ್ನಡಿಗರು ಬದುಕಿದರೆ ಅಲ್ಲೇ ಬದುಕಲಿ, ಸತ್ತರೆ ಅಲ್ಲೇ ಸಾಯಲಿ!

    ಒಂದು ಮೂಲದ ಪ್ರಕಾರ ವಿಸ್ತೃತ ಲಾಕ್​ಡೌನ್​ ಅವಧಿಯಲ್ಲೂ ಮಾಲ್​, ಜಿಮ್​, ಚಿತ್ರಮಂದಿರಗಳ ಮೇಲಿನ ನಿರ್ಬಂಧ ಮುಂದುವರಿಸುವ ಜತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನೂ ನಿರ್ಬಂಧಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

    ಶೇ.50 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಕೈಗಾರಿಕೆಗಳಿಗೆ ಅನುಮತಿ ನೀಡಲಾಗುವುದು. ವಾರದಲ್ಲಿ ಆರು ದಿನ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ಹೇಳಲಾಗುತ್ತಿದೆ.

    ಕರ್ನಾಟಕದ ರಾಗಿಗೆ ಜಾಗತಿಕ ಬ್ರ್ಯಾಂಡಿಂಗ್​​ ವ್ಯವಸ್ಥೆ: ನಿರ್ಮಲಾ ಸೀತಾರಾಮನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts