ರಾಜ್ಯದಲ್ಲಿ ಮೇ 3ಕ್ಕೆ ಲಾಕ್​ಡೌನ್​ ಮುಗಿಯುವುದು ಅನುಮಾನ; ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಬೇರೆ ಇದೆ..

Lockdown 15 April 20
Published on

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ.

ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದದಲ್ಲಿ ಎಲ್ಲ ಸಚಿವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಅವರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ವೇಳೆ ಬಹುತೇಕ ಸಚಿವರು ಮೇ 16ರವರೆಗೆ ಲಾಕ್​ಡೌನ್​ ಮುಂದುವರಿಸಲು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಮೇ 16ರವರೆಗೆ ಲಾಕ್​ಡೌನ್​ ಮುಂದುವರಿದರೆ ರಾಜ್ಯದಲ್ಲಿ ಕೊವಿಡ್​ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತದೆ. ಹಾಗಾಗಿ ಅವಧಿ ವಿಸ್ತರಣೆ ಮಾಡಬೇಕು ಎಂದು ತಜ್ಞರೂ ಕೂಡ ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಮೇ 16ರವರೆಗೆ ಲಾಕ್​ಡೌನ್​ ಮುಂದುವರಿಯಲು ಅವಕಾಶ ಮಾಡಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಮನವಿ ಮಾಡಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net