16 C
Bangalore
Thursday, December 12, 2019

ಲೈಟ್‌ಫಿಶಿಂಗ್ ಬೋಟುಗಳ ಜನರೇಟರ್ ವಶ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಉಡುಪಿ: ಕಾನೂನು ಉಲ್ಲಂಘಿಸಿ ಜನರೇಟರ್ ಬಳಸಿ ಅವೈಜ್ಞಾನಿಕ ಬೆಳಕು ಮೀನುಗಾರಿಕೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇತರೆ ಮೀನುಗಾರರು ನಡೆಸುತ್ತಿರುವ ಹೋರಾಟಕ್ಕೆ ಮಣಿದಿರುವ ಮೀನುಗಾರಿಕಾ ಇಲಾಖೆ, ಬುಧವಾರ ನಾಲ್ಕು ಬೋಟುಗಳ ಜನರೇಟರ್ ತೆರವುಗೊಳಿಸಿದೆ.

ಕಾನೂನು ಉಲ್ಲಂಘಿಸಿ 40-45 ಬೋಟ್‌ಗಳು ಜನರೇಟರ್ ಅಳವಡಿಸಿ ಬೆಳಕು ಮೀನುಗಾರಿಕೆ ಮಾಡುತ್ತಿವೆ. ಸುಮಾರು 20-23 ಬೋಟ್‌ಗಳು ಬಂದರಿನಲ್ಲಿದ್ದು, ಗುರುವಾರದೊಳಗೆ ಎಲ್ಲ ಬೋಟ್‌ಗಳ ಜನರೇಟರ್ ತೆರವು ಮಾಡಿ, ವಶಕ್ಕೆ ಪಡೆಯಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ದೂರು ನೀಡಲಾಗಿದೆ ಎಂದು ಜಿಲ್ಲಾ ಮೀನುಗಾರಿಕಾ ಉಪ ನಿರ್ದೇಶಕ ಪಾರ್ಶ್ವನಾಥ ತಿಳಿಸಿದ್ದಾರೆ.

ಅಧಿಕಾರಿಗಳಿಗೆ ತರಾಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾನೂನು ಮತ್ತು ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅವೈಜ್ಞಾನಿಕ ಬೆಳಕು ಮೀನುಗಾರಿಕೆ ನಡೆಸುತ್ತಿರುವ ಪರ್ಸಿನ್ ಮೀನುಗಾರರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆಳ ಸಮುದ್ರ, ನಾಡ ದೋಣಿ ಸಂಘ ಮೀನುಗಾರರು ಬುಧವಾರವೂ ಮಲ್ಪೆ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿಯಲ್ಲಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಾರ್ಶ್ವನಾಥ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಆಳ ಸಮುದ್ರ ಮೀನುಗಾರ ಸಂಘದ ಅಧ್ಯಕ್ಷ ಕಿಶೋರ್ ಸುವರ್ಣ ಮಾತನಾಡಿ, ಬೆಳಕು ಮೀನುಗಾರಿಕೆ ಖಂಡಿಸಿ ಅನೇಕ ಬಾರಿ ಮನವಿ, ಹೋರಾಟ ಮಾಡಿದರೂ, ಈವರೆಗೆ ಪ್ರಯೋಜನವಾಗಿಲ್ಲ. ಇದೇ ರೀತಿ ಮುಂದುವರಿದರೆ ಗುರುವಾರವೂ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸಿ ಪರ್ಸಿನ್ ಮೀನುಗಾರರು ಅವೈಜ್ಞಾನಿಕ ಮೀನುಗಾರಿಕೆಗೆ ತೆರಳಿದ್ದಾರೆ. ಆದರೂ ಕರಾವಳಿ ಕಾವಲುಪಡೆ ಪೊಲೀಸರು ಅವರನ್ನು ಹಿಡಿಯುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೀನುಗಾರ ಮುಖಂಡರಾದ ದಯಾನಂದ ಕೆ. ಸುವರ್ಣ, ವಿಠಲ ಕರ್ಕೇರ, ದಯಾನಂದ ಕುಂದರ್, ಮಹೇಶ್ ಸುವರ್ಣ ಇದ್ದರು.
ಬಳಿಕ ಇಲಾಖೆ ಅಧಿಕಾರಿಗಳು, ಕರಾವಳಿ ಕಾವಲುಪಡೆ ಪೊಲೀಸರು ಬೋಟ್‌ಗಳ ವಿರುದ್ಧ ಕ್ರಮ ಕೈಗೊಂಡರು.

ಬೋಟ್‌ಗಳ ನೋಂದಣಿ ರದ್ದು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅವೈಜ್ಞಾನಿಕ ಮೀನುಗಾರಿಕೆ ನಡೆಸುವ ಬೋಟುಗಳ ನೋಂದಣಿ ರದ್ದು ಮಾಡಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಅಲ್ಲದೆ ಈ ಬೋಟ್‌ಗಳಿಗೆ ಡೀಸೆಲ್ ವಿತರಣೆ ತಡೆ ಮತ್ತು ಪರವಾನಗಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಎಂದು ಇಲಾಖೆ ಉಪ ನಿರ್ದೇಶಕ ಪಾರ್ಶ್ವನಾಥ್ ತಿಳಿಸಿದ್ದಾರೆ.

ನಾಡದೋಣಿ ಅಕ್ರಮ ಮೀನುಗಾರಿಕೆ: ನಾಡದೋಣಿ ಮೀನುಗಾರರು ಅಕ್ರಮವಾಗಿ ಯಾಂತ್ರಿಕೃತ ರೀತಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘ ಮಲ್ಪೆ ಮೀನುಗಾರಿಕಾ ಇಲಾಖೆ ಅಧಿಕಾರಿಗಳನ್ನು ಭೇಟಿಯಾಗಿ ಆಗ್ರಹಿಸಿದ್ದಾರೆ.
ಸಾಂಪ್ರದಾಯಿಕ ನಾಡದೋಣಿ ಹೆಸರಿನಲ್ಲಿ ಅಕ್ರಮವಾಗಿ ಯಾಂತ್ರಿಕೃತ ಮೀನುಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸರ್ಕಾರದ ಆದೇಶದ ಪ್ರಕಾರ 22 ಎಂ.ಎಂ ಮೇಲ್ಪಟ್ಟ ಗಾತ್ರದ ಬಲೆ ಉಪಯೋಗಿಸಲು ಮಾತ್ರ ಅವಕಾಶವಿದೆ. ಆದರೆ ಅವರು 16ರಿಂದ 18 ಎಂ.ಎಂ. ಒಳಗಿನ ಗಾತ್ರದ ಬಲೆಗಳನ್ನು ಉಪಯೋಗಿಸಿ ಸಣ್ಣ ಗಾತ್ರದ ಮೀನು ಹಿಡಿದು ಮತ್ಸೃಸಂತತಿ ನಾಶಕ್ಕೆ ಕಾರಣವಾಗುತ್ತಿದ್ದಾರೆ ಎಂದು ಪರ್ಸಿನ್ ಮೀನುಗಾರರು ಆರೋಪಿಸಿದ್ದಾರೆ.
ಅಖಿಲ ಕರ್ನಾಟಕ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ಗುರುದಾಸ್ ಬಂಗೇರ, ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ಯಶೋಧರ ಅಮೀನ್, ರಾಮ ಸುವರ್ಣ, ನವೀನ್ ಸುವರ್ಣ, ಮಧು ಕರ್ಕೇರ, ವಿಶ್ವನಾಥ್, ನವೀನ್ ಕೋಟ್ಯಾನ್ ಇದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...