More

    ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

    ನುಗ್ಗೇಹಳ್ಳಿ: ಫೆಬ್ರವರಿ 8ರಂದು ಕಲ್ಕೆರೆ ವೃತ್ತದ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿರುವ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಇತ್ತೀಚೆಗೆ ಶಾಸಕ ಸಿ.ಎನ್.ಬಾಲಕೃಷ್ಣ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಬಿಡುಗಡೆ ಮಾಡಿದರು.
    ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಇದು ಕನ್ನಡ ಸಂಸ್ಕೃತಿ ಮತ್ತು ಸಾಹಿತ್ಯದ ಹಬ್ಬವಾಗಲಿದೆ ಎಂದು ತಿಳಿಸಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಲ್.ಮಲ್ಲೇಶ್‌ಗೌಡ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಮೂಲಕ ಸಂಸ್ಕೃತಿ ಮತ್ತು ಸಾಹಿತ್ಯದ ಕೆಲಸಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ ಎಂದರು.

    ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಎನ್.ಅಶೋಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎನ್.ಲೋಕೇಶ್, ಹೋಬಳಿ ಅಧ್ಯಕ್ಷ ಎಸ್.ಪಿ.ದಯಾನಂದ್, ಪದಾಧಿಕಾರಿಗಳಾದ ಜಬಿ ಉಲ್ಲಾ ಬೇಗು, ಯಶೋಧಾ ಜೈನ್, ಶೋಭಾ ಗೋವಿಂದರಾಜ್, ಮುಳ್ಕೆರೆ ಪ್ರಕಾಶ್, ಟಿ.ಮಂಜಪ್ಪ, ವಿ.ಜಿ.ದ್ಯಾವೇಗೌಡ, ರೂಪಾ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts