More

    ಚಿಕ್ಕಬಳ್ಳಾಪುರ ಸೀಟಿನ ಬಗ್ಗೆ ಚರ್ಚೆ ಮಾಡಲು ಶಿವಶಂಕರ್ ರೆಡ್ಡಿಯನ್ನು ಮನೆಗೆ ಕರೆಸಿದ ಖರ್ಗೆ

    ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಇಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆಯಿದ್ದು, ಕರ್ನಾಟಕದಿಂದ 9-10 ಸೀಟಿಗೆ ಟಿಕೆಟ್ ಘೋಷಣೆಯಾಗಬಹುದು.

    ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್‌ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಶ್ರಮಿಸುತ್ತಿದೆ. ಹಲವು ಸಚಿವರ ಹೆಸರನ್ನು ಕೈ ನಾಯಕರು ಶಾರ್ಟ್‌ ಲಿಸ್ಟ್‌ ಮಾಡಿದ್ದಾರೆ. ಏತನ್ಮಧ್ಯೆ ಮಾಜಿ ಸಚಿವ ಗೌರಿಬಿದನೂರಿನ ಎನ್‌.ಎಚ್‌.ಶಿವಶಂಕರ ರೆಡ್ಡಿಗೆ ಬಿಜೆಪಿ ಗಾಳ ಹಾಕಿದೆಯೆಂಬ ಮಾತು ಬಲವಾಗಿ ಕೇಳಿ ಬರುತ್ತಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ರೆಡ್ಡಿ ಸೇರ್ಪಡೆ ವಿಚಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿ ನಾಯಕರು ಅವರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್.ಪುಟ್ಟಸ್ವಾಮಿ ಗೌಡ ವಿರುದ್ಧ ಸೋತ ಬಳಿಕ ಎನ್.ಎಚ್.ಶಿವಶಂಕರರೆಡ್ಡಿ ಕಾಂಗ್ರೆಸ್ ನಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದರು. ಈ ಮಧ್ಯೆ ವರ್ಗಾವಣೆ, ನಿಗಮ ಮಂಡಳಿ, ನಾಮ ನಿರ್ದೇಶನಗಳಲ್ಲಿ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಬೆಂಬಲಿಗರಿಗೆ ಕಾಂಗ್ರೆಸ್ ನಾಯಕರು ಹೆಚ್ಚಿನ ಅವಕಾಶ ಕಲ್ಪಿಸಿಕೊಡುತ್ತಿರುವುದು ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿದೆ.

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಹೈಕಮಾಂಡ್ ಗೆ ಮೂವರು ಆಕಾಂಕ್ಷಿಗಳ ಹೆಸರು ಹೋಗಿದ್ದು, ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ, ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತ್ತು ಶಿವಶಂಕರ್ ರೆಡ್ಡಿ ಹೆಸರೂ ಹೋಗಿದೆ. ಆದರೆ “ನಾನೂ ಕೂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ” ಎಂದು ಶಿವಶಂಕರರೆಡ್ಡಿ ತಿಳಿಸಿದ್ದಾರೆ.

    ಏತನ್ಮಧ್ಯೆ ಚಿಕ್ಕಬಳಾಪುರ ಸೀಟಿನ ಬಗ್ಗೆ ಚರ್ಚೆ ಮಾಡಲು ಶಿವಶಂಕರ್ ರೆಡ್ಡಿಯನ್ನು ಖರ್ಗೆ ಮನೆಗೆ ಕರೆಸಿದ್ದಾರೆ ಎಂದು ತಿಳಿದುಬಂದಿದೆ.

    ರಾಜ್ಯಸಭಾ ಸದಸ್ಯರಾಗಿ ಸುಧಾಮೂರ್ತಿ ನೇಮಕ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts