ರಾಯಚೂರು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಫುಲ್ ಫೈಟ್

Latest News

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಕೂಟ, ಮತದಾರರ ಬಗೆಯುವ ನಂಬಿಕೆ ದ್ರೋಹ: ಸುಪ್ರೀಂಗೆ ಅರ್ಜಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಅಧಿಕಾರದಾಹದ ಹಿನ್ನೆಲೆಯಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಅನೈತಿಕ ಮೈತ್ರಿ ಮಾಡಿಕೊಳ್ಳುತ್ತಿವೆ. ಇದು ಮತದಾರರಿಗೆ ಬಗೆಯುತ್ತಿರುವ...

ಉಪಚುನಾವಣೆಯಲ್ಲಿ ಜಾ.ದಳ, ಬಿಜೆಪಿಗೆ ಗೆಲುವು

ಸಕಲೇಶಪುರ: ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಮಲಾ 73...

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್...

ವೆಂಕಟೇಶ ಹೂಗಾರ್ ರಾಯಚೂರು
ರಾಯಚೂರು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭಾರಿ ಪೈಪೋಟಿ ನಡೆದಿದ್ದು, ಪಕ್ಷದ ಹಿರಿಯ ಮುಖಂಡರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಇತ್ತ, ಕಾರ್ಯಕರ್ತರೂ ಸಹ ಗೊಂದಲದಲ್ಲಿದ್ದಾರೆ.

ಕಾಂಗ್ರೆಸ್‌ನ ಭದ್ರಕೋಟೆ ಎಂದೆ ಹೆಸರಾಗಿರುವ ರಾಯಚೂರು ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯ ಆಯ್ಕೆಯ ಗೊಂದಲದಲ್ಲಿ ಮುಳುಗಿದೆ. ಇನ್ನೇನು ಲೋಕಸಭೆ ಚುನಾವಣೆಯ ಅಧಿಕೃತ ನಾಮಪತ್ರ ಸಲ್ಲಿಕೆಗೆ ನಾಲ್ಕು ದಿನ ಅಧಿಸೂಚನೆ ಹೊರಡಿಸುವುದು ಬಾಕಿ ಉಳಿದಿದೆ. ರಾಜ್ಯದ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಬಿ.ವಿ.ನಾಯಕರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕ್ಷೇತ್ರದಲ್ಲಿ ಪಕ್ಷದ ನಾಯಕರ, ಕಾರ್ಯಕರ್ತರ ಜತೆ ಬಿ.ವಿ.ನಾಯಕರು ಸಂವಹನ ಸಾಧಿಸುವಲ್ಲಿ ನಿರತರಾಗಿದ್ದಾರೆ. ಆದರೆ, ಬಿಜೆಪಿಯಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಡಿಕೊಂಡಿರುವ ಎಡವಟ್ಟನ್ನೂ ಲೋಕಸಭೆ ಯಲ್ಲೂ ಮುಂದುವರಿದಿದೆ. ಕೊನೇ ಗಳಿಗೆಯಲ್ಲಿ ಅಭ್ಯರ್ಥಿ ಯಾರೆಂದು ಘೋಷಿಸಿದರೆ ಸಂಘಟನೆ ಸವಾಲಾಗುವುದು ಎನ್ನುವ ಚಿಂತೆ ಆಕಾಂಕ್ಷಿ ಹಾಗೂ ಪಕ್ಷದ ಕಾರ್ಯಕರ್ತರನ್ನು ಕಾಡುತ್ತಿದೆ.

ಈಗಾಗಲೆ ರಾಜ್ಯದ ನಾಯಕರು ಕೇಂದ್ರ ಚುನಾವಣಾ ಸಮಿತಿಗೆ ರಾಯಚೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಕಳಿಸಿದೆ. ಬಿಜೆಪಿ ಮೊದಲ ಮತ್ತು 2ನೇ ಪಟ್ಟಿಯಲ್ಲೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಈ ಮೂಲಕ ಟಿಕೆಟ್ ಪಡೆಯುವ ಕಸರತ್ತು ಪ್ರತಿಷ್ಟೆಯಾಗಿ ಮಾರ್ಪಟ್ಟಿದೆ ಎಂಬುದು ತಿಳಿಯುತ್ತದೆ. ಮಾಜಿ ಸಚಿವ ಅಮರೇಶ್ವರ ನಾಯಕರ ಪರ ಶಿವನಗೌಡ ನಾಯಕ ಏಕಾಂಗಿಯಾಗಿ ಬಿಗಿ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಸಹಿತ ಧ್ವನಿ ಗೂಡಿಸಿದ್ದಾರೆ ಎನ್ನಲಾಗುತ್ತದೆ. ಅತ್ತ ಮಾಜಿ ಶಾಸಕ ತಿಪ್ಪರಾಜು ಹವಲ್ದಾರ್ ಪರ ಸುರಪುರ ಶಾಸಕ ರಾಜುಗೌಡ, ವೆಂಕಟರಾವ್ ಮುದ್ನಾಳ, ಮುಖಂಡ ಎನ್.ಶಂಕ್ರಪ್ಪ ಬಿಗಿ ಪಟ್ಟು ಹಿಡಿದಿದ್ದಾರೆ. ಮೇಲಾಗಿ ರಾಜ್ಯಾಧ್ಯಕ್ಷ ಬಿಎಸ್‌ವೈ ಅವರ ಕೃಪೆ ತಿಪ್ಪರಾಜುಗೆ ಇರುವುದರಿಂದ ಟಿಕೆಟ್ ಕದನ ಕುತೂಹಲ ಪಡೆದುಕೊಂಡಿದೆ.

ಯಾದಗಿರಿ, ರಾಯಚೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ 2ನೇ ಹಂತದ ನಾಯಕರು ಅಭ್ಯರ್ಥಿ ಯಾರಾಗಲಿದ್ದಾರೆ. ಯಾರನ್ನು ಕೇಂದ್ರ ಸಮಿತಿ ಆಯ್ಕೆ ಮಾಡಿ ಕಳಿಸಲಿದೆ. ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಗೆ ಸಮಬಲದ ಪೈಪೋಟಿ ನೀಡಲು ಸಮರ್ಥರು ಯಾರು? ಎನ್ನುವ ಗೊಂದಲಕ್ಕೆ ಬಿದ್ದಿದ್ದಾರೆ. ಕೆಲ ಕಾರ್ಯಕರ್ತರಂತೂ ಪಕ್ಷದ ನಾಯಕರು ನಡೆಗೆ ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಇನ್ನೂ ಕೆಲವರು ಯಾರಾದರೇನು ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ಪಕ್ಷದ ಪರ ಪ್ರಚಾರ ಆರಂಭಿಸಿದ್ದಾರೆ.

ದೆಹಲಿಗೆ ಶಿಫ್ಟಾದ ಕ್ಷೇತ್ರದ ರಾಜಕಾರಣ
ದೆಹಲಿಗೆ ಕ್ಷೇತ್ರದ ಟಿಕೆಟ್ ರಾಜಕಾರಣ ಶಿಫ್ಟಾಗಿದೆ. ಕೆಲವರಂತೂ ತಮ್ಮ, ತಮ್ಮ ಮುಖಂಡರಿಗೆ ಕರೆ ಮಾಡಿ ಯಾರಾಗಲಿದ್ದಾರೆ ಅಭ್ಯರ್ಥಿ ಎನ್ನುವ ಪ್ರಶ್ನೆ ಹಾಕಲಾರಂಭಿಸಿದ್ದಾರೆ. ಅಮರೇಶ್ವರ ನಾಯಕರಿಗೆ ಟಿಕೆಟ್ ನೀಡಿದರೆ ಆಗುವ ಲಾಭ, ನಷ್ಟ ಹಾಗೂ ತಿಪ್ಪರಾಜುಗೆ ನೀಡಿದರೆ ಆಗುವ ಲಾಭ, ನಷ್ಟದ ಬಗ್ಗೆ ಕ್ಷೇತ್ರದಲ್ಲಿ ಚರ್ಚೆಗಳು ಶುರುವಾಗಿವೆ. ಪಕ್ಷದೊಳಗಿನ ಈ ಆಯ್ಕೆ ಗೊಂದಲದಿಂದಾಗಿ ಅತ್ತ ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ನಮ್ಮದೆ ಗೆಲುವು ಎಂದು ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಂಘರ್ಷದ ಸಂಘಟನೆಯ ಸವಾಲನ್ನು ಹೊರಬೇಕಾದ ಪರಿಸ್ಥಿತಿ ಎದುರಾಗಿದೆ.

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...