23.9 C
Bangalore
Friday, December 6, 2019

ಎಐಎಡಿಎಂಕೆಗೆ ಅಪ್ಪ ಆದ ಪ್ರಧಾನಿ ಮೋದಿ!

Latest News

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಎನ್​ಕೌಂಟರ್​ಗೆ ದೇಶಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ: ಪೊಲೀಸರ ಕ್ರಮಕ್ಕೆ ಶ್ಲಾಘನೆ

ಹೈದರಾಬಾದ್​​: ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ದಿಶಾ ರೆಡ್ಡಿ ಗ್ಯಾಂಗ್ ರೇಪ್​ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವುದಕ್ಕೆ ದೇಶದಾದ್ಯಂತ...

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೇರೆ ಯಾರು ಅಲ್ಲ ಅವರು ತಮಿಳುನಾಡಿನ ಆಡಳಿತಾ ರೂಢ ಆಲ್‌ ಇಂಡಿಯಾ ಅಣ್ಣ ದ್ರಾವಿಡ ಮುನ್ನೇತ್ರ ಕಳಗಂ (AIADMK)ನ ಡ್ಯಾಡಿ(ತಂದೆ) ಎಂದು ಡೈರಿ ಅಭಿವೃದ್ಧಿ ಸಚಿವ ಕೆ ಟಿ ರಾಜೇಂತಿರ ಬಾಲಾಜಿ ಹೇಳಿದ್ದಾರೆ.

ಶ್ರೀವಿಲ್ಲಿಪುತುರ್‌ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಅಮ್ಮ (ಎಐಎಡಿಎಂಕೆ ಅಧಿನಾಯಕಿ ಜಯಲಲಿತಾ) ಅವರ ಸಾವಿನ ನಂತರ ಮೋದಿಯವರು ಎಐಎಡಿಎಂಕೆಗೆ ತಂದೆಯಂತೆ ಮಾರ್ಗದರ್ಶನ ಮಾಡಿದ್ದಾರೆ. ಹಾಗಾಗಿ ನಮ್ಮ ತಾಯಿಯನ್ನು ಕಳೆದುಕೊಂಡ ಬಳಿಕ ಖಂಡಿತವಾಗಿಯು ಮಾರ್ಗದರ್ಶನ ಮತ್ತು ಬೆಂಬಲ ನೀಡುವ ಮೂಲಕ ಮೋದಿ ತಂದೆಯಾಗಿದ್ದಾರೆ. ಮೋದಿ ನಮಗೆ ಮಾತ್ರ ತಂದೆಯಲ್ಲ, ಅವರು ಇಡೀ ದೇಶಕ್ಕೆ ತಂದೆಯಾಗಿದ್ದಾರೆ. ಆದ್ದರಿಂದಲೇ ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಬಾಲಾಜಿ ಹೇಳಿದ್ದಾರೆ.

ಇನ್ನು 2014ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಜಯಲಲಿತಾ ಅವರು ತಮಿಳುನಾಡಿನ ಮಹಿಳೆ ಅಥವಾ ಗುಜರಾತಿನ ಮೋದಿ? ಎಂಬ ಪ್ರಶ್ನೆ ರೂಪದ ಘೋಷವಾಕ್ಯವೊಂದನ್ನು ತಮಿಳುನಾಡಿನ ಜನರ ಮುಂದಿಟ್ಟಿದ್ದರು. ಅಂದು ಪ್ರಧಾನಿ ಅಭ್ಯರ್ಥಿಯಾಗಿದ್ದ ಮೋದಿಗೆ ಟಾಂಟ್‌ ನೀಡುವ ರೀತಿ ಇದ್ದ ಈ ಹೇಳಿಕೆಯು ತಮಿಳುನಾಡಿನಲ್ಲಿ ಭಾರೀ ಪ್ರಚಾರ ಪಡೆದುಕೊಂಡಿತ್ತು.

ತಮಿಳುನಾಡು ಸರ್ಕಾರವು ನನ್ನ ನೇತೃತ್ವದಲ್ಲಿ ಗುಜರಾತ್‌ನ ಮೋದಿ ನೇತೃತ್ವದ ಸರ್ಕಾರಕ್ಕಿಂತಲೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮೋದಿಗಿಂತಲೂ ಈ ತಮಿಳುನಾಡು ಮಹಿಳೆ ಉತ್ತಮ ಆಡಳಿತ ನೀಡಿದ್ದಾರೆ ಎಂದು ಜಯಲಲಿತಾ ಅವರು ಚೆನ್ನೈನಲ್ಲಿ ಪ್ರಚಾರದ ವೇಳೆ ಮೋದಿಯನ್ನು ಟೀಕಿಸಿದ್ದರು.

2014ರ ಚುನಾವಣೆಯಲ್ಲಿ ರಾಜ್ಯದ 39 ಸೀಟುಗಳ ಪೈಕಿ ಎಐಎಡಿಎಂಕೆಯು 37 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಐದು ಸ್ಥಾನಗಳನ್ನು ನೀಡಿದೆ.
ಈ ಕುರಿತಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕರು ನಾಗರಾಜನ್‌ ಪ್ರತಿಕ್ರಿಯಿಸಿ, ಮೋದಿಯವರು ಸರಿಯಾದ ಮಾರ್ಗದಲ್ಲಿ ರಾಷ್ಟ್ರಕ್ಕೆ ಮಾರ್ಗದರ್ಶನ ನೀಡುತ್ತಿರುವುದನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. (ಏಜೆನ್ಸೀಸ್)

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...