22.5 C
Bengaluru
Sunday, January 19, 2020

ಮೊದಲ ಹಂತದಲ್ಲಿ 4 ಕ್ಷೇತ್ರಗಳು ಸೂಕ್ಷ್ಮ: ಮಂಡ್ಯ, ಹಾಸನ, ತುಮಕೂರು, ಬೆಂ.ಗ್ರಾಮಾಂತರ ಕ್ಷೇತ್ರಗಳಲ್ಲಿ ಹೆಚ್ಚಿನ ಭದ್ರತೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಂದೆ, ಪುತ್ರ, ಅಣ್ಣನ ಮಗ ಮತ್ತು ಪ್ರಭಾವಿ ಸಚಿವನ ಸಹೋದರ ನಿಂತಿರುವ ಮಂಡ್ಯ, ಹಾಸನ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳು ಸೂಕ್ಷ್ಮ ಕ್ಷೇತ್ರಗಳೆಂದು ಪೊಲೀಸ್ ಇಲಾಖೆ ಘೋಷಣೆ ಮಾಡಿದೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಭಾವಿ ಸಚಿವ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಸ್ಪರ್ಧಿಸುತ್ತಿದ್ದಾರೆ.

ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಮಂಡ್ಯದಲ್ಲಿ ಸಣ್ಣಪುಟ್ಟ ಕಲ್ಲು ತೂರಾಟ ಪ್ರಕರಣ ದಾಖಲಾಗಿವೆ. 7 ಕೇಂದ್ರ ಪಡೆ, 9 ಕೆಎಸ್​ಆರ್​ಪಿ ನಿಯೋಜಿಸಿದ್ದು, ಐಜಿಪಿ ದರ್ಜೆ ಅಧಿಕಾರಿ ಮಂಡ್ಯದಲ್ಲೇ ಮೊಕ್ಕಾಂ ಹೂಡಿದ್ದಾರೆ. ಉಳಿದ ತಾಲೂಕುಗಳಿಗೆ ಹೋಲಿಸಿದರೆ ಮಂಡ್ಯದಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಡಿಜಿ-ಐಜಿಪಿ ನೀಲಮಣಿ ಎನ್.ರಾಜು ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು

2018ರಲ್ಲಿ ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆದರೆ, ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೂ ಮಲೆನಾಡು, ಕೇರಳ ಮತ್ತು ತಮಿಳುನಾಡು ಸಂರ್ಪಸುವ ಪ್ರದೇಶಗಳಲ್ಲಿ ಕೂಂಬಿಂಗ್, ರಾತ್ರಿ ಗಸ್ತು ನಡೆಯುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ 58,225 ಮತಗಟ್ಟೆಗಳಿದ್ದು, 11,992 ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಮೊದಲ ಹಂತದ ಮತದಾನಕ್ಕೆ 55 ಕಂಪನಿಗಳು, 2ನೇ ಹಂತಕ್ಕೆ 57 ಕಂಪನಿಗಳನ್ನು ನಿಯೋಜನೆ ಮಾಡಲಾಗುತ್ತದೆ. ಪೊಲೀಸರ ಜತೆಗೆ ಗೃಹರಕ್ಷಕ ದಳ, ಅರಣ್ಯ ರಕ್ಷಕರು, ಜೈಲು ವಾರ್ಡರ್​ಗಳನ್ನು ಬಳಸಿಕೊಳ್ಳುತ್ತಿದ್ದು, ಒಟ್ಟಾರೆ 90,997 ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜತೆಗೆ ಹೊರ ರಾಜ್ಯಗಳ 7 ಸಾವಿರ ಪೊಲೀಸರ ಸೇವೆಯೂ ಸಿಗಲಿದೆ ಎಂದು ನೀಲಮಣಿ ರಾಜು ವಿವರಿಸಿದರು.

ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ 98,055 ಪರವಾನಗಿ ಶಸ್ತ್ರಗಳಲ್ಲಿ 95,422 ಶಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಅಪರಾಧ ಹಿನ್ನೆಲೆಯುಳ್ಳ 47,427 ಮಂದಿಗಳ ವಿರುದ್ಧ 44,844 ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 12,621 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಸುಮಲತಾಗೆ ಖಾಕಿ ಸರ್ಪಗಾವಲು: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಭದ್ರತೆಗೆ ಬೆಂಗಳೂರಿನಿಂದ ತಲಾ ಒಬ್ಬ ಡಿವೈಎಸ್​ಪಿ, ಇನ್​ಸ್ಪೆಕ್ಟರ್ ಮತ್ತು ಮೂವರು ಸಿಬ್ಬಂದಿ ನಿಯೋಜಿಸಲಾಗಿದೆ. ಸಿಐಎಸ್​ಎಫ್ ಕಂಪನಿಯ 30 ಸಿಬ್ಬಂದಿ ಅವರೊಂದಿಗೆ ಇರಲಿದ್ದಾರೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗ ಎಡಿಜಿಪಿ ಕಮಲ್ ಪಂತ್ ತಿಳಿಸಿದರು.

16 ಕೋಟಿ ರೂ. ನಗದು, 44 ಕೆಜಿ ಬೆಳ್ಳಿ ವಸ್ತು ಜಪ್ತಿ

ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 15.72 ಕೋಟಿ ರೂ. ನಗದು, 3.12 ಕೆ.ಜಿ. ಚಿನ್ನ, 43.85 ಕೆ.ಜಿ. ಬೆಳ್ಳಿ, 23,248 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಅಬಕಾರಿ ಕಾಯ್ದೆ ಉಲ್ಲಂಘ್ಠ್ಟಠಿ6ಛಿನೆ ಆರೋಪದಲ್ಲಿ 1,595 ಪ್ರಕರಣಗಳು ದಾಖಲಾಗಿವೆ. 18 ಕ್ರಿಮಿನಲ್ ಕೇಸ್, 17 ಹಲ್ಲೆ, ಕೊಲೆ ಯತ್ನ ಮತ್ತು 1,697 ಇತರ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಮಲ್ ಪಂತ್ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕಿಲ್ಲ ಅಡ್ಡಿ

ಮೊದಲ ಹಂತದ ಮತದಾನ (ಏ. 18) ನಡೆಯುವ ದಿನದಂದೆ ಪ್ರಧಾನಿ ಮೋದಿ ಅವರ ಸಮಾವೇಶ ಕಲಬುರಗಿಯಲ್ಲಿ ನಡೆಯಲಿದೆ. ಅಲ್ಲಿಗೆ ಬಳ್ಳಾರಿ, ಕಲಬುರಗಿ, ಬೆಳಗಾವಿ ಜಿಲ್ಲೆ ಪೊಲೀಸರು ಮತ್ತು ಕೆಎಸ್​ಆರ್​ಪಿ, ಡಿಎಆರ್ ಸಿಬ್ಬಂದಿ ನಿಯೋಜಿಸಲಾಗುತ್ತದೆ. ಅವರು ಆಯಾ ಕ್ಷೇತ್ರದ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಭದ್ರತೆ ಸಮಸ್ಯೆಯಾಗುವುದಿಲ್ಲ ಎಂದು ನೀಲಮಣಿ ರಾಜು ತಿಳಿಸಿದರು

ಭದ್ರತೆ ಪಡೆಯಲು ಜೀವಭಯವುಳ್ಳ ಪತ್ರಕರ್ತರಿಗೆ ಅವಕಾಶ

ಪತ್ರಕರ್ತರು ಜೀವ ಭಯ ಇರುವುದಾಗಿ ದೂರು ಕೊಟ್ಟರೆ ಭದ್ರತೆ ನೀಡುವಂತೆ ಎಲ್ಲ ಇನ್​ಸ್ಪೆಕ್ಟರ್ ಮತ್ತು ಡಿವೈಎಸ್​ಪಿಗಳಿಗೆ ಸೂಚನೆ ಕೊಟ್ಟಿರುವುದಾಗಿ ನೀಲಮಣಿ ರಾಜು ತಿಳಿಸಿದರು. ಪತ್ರಕರ್ತರ ಮೇಲೆ ಹಲ್ಲೆಯಾದರೆ ನಾನು ಹೊಣೆಯಲ್ಲ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಡ್ಯದ ಜೆಡಿಎಸ್ ಸಮಾವೇಶದಲ್ಲಿ ಹೇಳಿಕೆ ನೀಡಿದ್ದರು. ಈ ಸಂಬಂಧ ಕೈಗೊಂಡಿರುವ ಕ್ರಮದ ಬಗೆಗಿನ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಪೊಲೀಸ್ ವಾಹನದಲ್ಲಿ ಹಣ ಸಾಗಿಸುತ್ತಿರುವುದು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಅದರಲ್ಲಿ ಯಾವುದೇ ಗೊಂದಲ್ಲ ಇಲ್ಲ.

| ನೀಲಮಣಿ ಎನ್.ರಾಜು ರಾಜ್ಯ ಪೊಲೀಸ್ ಮಹಾನಿರ್ದೇಶಕರು

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...