More

    ಲೋಕಸಭೆ ಚುನಾವಣೆ 6 ನೇ ಹಂತ: ಮಂದಗತಿಯಲ್ಲಿ ಮತದಾನ.. ಕಾರಣ ಇದೇ ನೋಡಿ..!

    ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಶನಿವಾರ(ಮೇ 25) 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 58 ಲೋಕಸಭಾ ಸ್ಥಾನಗಳಿಗೆ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಂದಗತಿಯಲ್ಲಿ ಸಾಗುತ್ತಿದೆ. ಬೆಳಗ್ಗೆ 11 ಗಂಟೆಯವರೆಗೆ ಸುಮಾರು 26% ರಷ್ಟು ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಟಿಎಂಸಿ ಪ್ರತಿಭಟನೆ ನಡೆಸುತ್ತಿದೆ.

    ಇದನ್ನೂ ಓದಿ: ನಿಮ್ಮ ಸರ್ಕಾರ ನಿಜವಾಗಿಯೂ ಬದುಕಿದೆಯೋ ಅಥವಾ ಸತ್ತಿದೆಯೋ ಒಮ್ಮೆ ಸ್ಪಷ್ಟವಾಗಿ ಹೇಳಿಬಿಡಿ: ಆರ್​. ಅಶೋಕ ಗರಂ

    ಹಲವೆಡೆ ಇವಿಎಂ ಯಂತ್ರಗಳು ಕೈಕೊಟ್ಟಿದ್ದು, ಕೂಡಲೇ ಸರಿಪಡಿಸಲಾಗಿದೆ. ಮತಗಟ್ಟೆಗಳಲ್ಲಿ ಬೃಹತ್ ಸರತಿ ಸಾಲುಗಳು ಕಂಡುಬರುತ್ತಿವೆ. ಇನ್ನೊಂದೆಡೆ ಇವಿಎಂಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಚುನಾವಣಾ ಆಯೋಗಕ್ಕೆ ನೂರಾರು ದೂರುಗಳು ಬರುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿ ಹೊರತುಪಡಿಸಿ, ಪಶ್ಚಿಮ ಬಂಗಾಳದ ಲೋಕಸಭಾ ಕ್ಷೇತ್ರಗಳು, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಾಜೌರಿ ಮತ್ತು ಒಡಿಶಾದ ಪುರಿ ಲೋಕಸಭಾ ಕ್ಷೇತ್ರಗಳಲ್ಲಿ ಇವಿಎಂಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿವಿಧ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿವೆ.

    ದೆಹಲಿಯ ಹಲವು ಭಾಗಗಳಲ್ಲಿ ಮತದಾನ ಪ್ರಕ್ರಿಯೆ ನಿಧಾನವಾಗಿ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅತಿಶಿ ಹೇಳಿದ್ದಾರೆ. ಚಾಂದಿನಿ ಚೌಕ್‌ನ ದೆಹಲಿ ಗೇಟ್ ಪ್ರದೇಶದ ಮತಗಟ್ಟೆಯಲ್ಲಿ ಭಾರಿ ಸರತಿ ಸಾಲು ಇದ್ದು, ಸಮಾರು 2 ಗಂಟೆ ಇವಿಎಂ ಕೆಲಸ ಮಾಡಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಆರೋಪಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಇವಿಎಂಗಳು ಕಾರ್ಯನಿರ್ವಹಿಸದ ಕಾರಣ ಜನರು ಮಂಡುಟೆಂಡದಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮತದಾನಕ್ಕೆ ಎರಡು ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತದೆ ಎಂದು ಮತದಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.


    ಇನ್ನು ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಹಲವು ಮತಗಟ್ಟೆಗಳಲ್ಲಿ ಇವಿಎಂ ಯಂತ್ರಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ ಚುನಾವಣಾ ಆಯೋಗದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಇವಿಎಂ ಯಂತ್ರಗಳು ಕಾರ್ಯನಿರ್ವಹಿಸದ ಕಡೆ ನಿಗದಿತ ಸಮಯವನ್ನು ವಿಸ್ತರಿಸುವಂತೆ ಅವರು ಆಯೋಗಕ್ಕೆ ಮನವಿ ಮಾಡಿದ್ದಾರೆ.


    ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹಲವು ಬೂತ್‌ಗಳಲ್ಲಿ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಲಾಗುತ್ತಿದೆ ಮತ್ತು ರಿಗ್ ಮಾಡಲಾಗುತ್ತಿದೆ ಎಂದು ಪಿಡಿಪಿ ಅಭ್ಯರ್ಥಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ಯಾವುದೇ ಕಾರಣವಿಲ್ಲದೆ ಪಿಡಿಪಿ ಪೋಲಿಂಗ್ ಏಜೆಂಟರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬಂಧಿಸಲಾಗಿದೆ ಎಂದು ಮೆಹಬೂಬಾ ಮುಫ್ತಿ ಧರಣಿ ನಡೆಸುತ್ತಿದ್ದಾರೆ.

    ಹಕ್ಕು ಚಲಾಯಿಸಲು ಅವಕಾಶ: ಇವಿಎಂಗಳ ಅಸಮರ್ಪಕ ಕಾರ್ಯಕ್ಕೆ ಸಂಬಂಧಿಸಿದಂತೆ ಬಂದಿರುವ ದೂರುಗಳನ್ನು ನಿಯಮಿತವಾಗಿ ಪರಿಶೀಲಿಸಿ ಪರಿಹರಿಸಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಮತದಾನ ಮಾಡಲು ಮತಗಟ್ಟೆಗೆ ಬಂದ ಪ್ರತಿಯೊಬ್ಬ ಮತದಾರರಿಗೂ ಮತದಾನದ ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

     

    ಈ ಧರ್ಮದಲ್ಲಿದೆ ಒತ್ತಡ ನಿವಾರಣೆಗೆ ಮದ್ದು! ಖ್ಯಾತ ಪಾಪ್ ತಾರೆ ಕ್ಯಾಮಿಲಾ ಕ್ಯಾಬೆಲ್ಲೊ ಹೇಳಿಕೆ ವೈರಲ್​​​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts