More

    ಲೋಕಸಭಾ ಚುನಾವಣೆ ಗೆಲ್ಲಲೇ ಬೇಕು

    ಚಿಕ್ಕಮಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಪಕ್ಷ ಸಂಘಟನೆ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲ ಮುಖಂಡರೂ ಹಾಗು ಕಾರ್ಯಕರ್ತರು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ವೀಕ್ಷಕ ಮಂಕಾಳ ವೈದ್ಯ ತಿಳಿಸಿದರು.

    ಶುಕ್ರವಾರ ಲೋಕಸಭಾ ಚುನಾವಣೆ ಸಿದ್ಧತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಈ ವಿಷಯದಲ್ಲಿ ಯಾವುದೇ ಗೊಂದಲಕ್ಕೂ ಅವಕಾಶ ನೀಡುವುದಿಲ್ಲ. ಹಲವು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಲೋಕಸಭಾ ಚುನಾವಣೆಗಾಗಿ ಕಾರ್ಯ ಆರಂಭಿಸಿದ್ದಾರೆ. ಇಲ್ಲಿಯೂ ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮತ್ ಮಾತನಾಡಿ, ಬಿಜೆಪಿ ಸರ್ಕಾರದಲ್ಲಾಗಿರುವ ವೈಫಲ್ಯಗಳನ್ನು ಜನರಿಗೆ ತಿಳಿಸುವ ಜತೆಗೆ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಜನರ ಮನಸ್ಸಿಗೆ ಮುಟ್ಟುವಂತೆ ನೋಡಿಕೊಳ್ಳಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮಗೆ ಹಲವು ಸವಾಲುಗಳಿದ್ದು, ಇವುಗಳನ್ನು ಮೀರಿ ನಮ್ಮ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ತಳಮಟ್ಟದಿಂದ ಕೆಲಸ ಮಾಡಬೇಕಿದೆ ಎಂದರು.ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿ ವಿಸ್ತಾರವಾಗಿದೆ. ನಾವು ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಎದುರಿಸುತ್ತಿದ್ದೇವೆ. ಈ ಎರಡೂ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.ಮಾಜಿ ಸಚಿವೆ ಮೋಟಮ್ಮ, ಮಾಜಿ ಉಪಸಭಾಪತಿ ಬಿ.ಎಲ್.ಶಂಕರ್, ಶಾಸಕರಾದ ಕೆ.ಎಸ್.ಶ್ರೀನಿವಾಸ್, ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts