More

    102 ಕ್ಷೇತ್ರಗಳಲ್ಲಿ ಇಂದಿನಿಂದ `ನಾಮಪತ್ರ’ ಸಲ್ಲಿಕೆ ಆರಂಭ

    ನವದೆಹಲಿ: ಲೋಕಸಭಾ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ(ಮಾ.20) ಆರಂಭವಾಗಿದೆ. 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.19ರಂದು ಚುನಾವಣೆ ನಡೆಯಲಿದೆ.

    ಇದನ್ನೂ ಓದಿ: ‘ನನ್ನನ್ನು ಕ್ಷಮಿಸಿ, ನನ್ನ ಮಾತುಗಳನ್ನು ವಾಪಸ್​ ತೆಗೆದುಕೊಳ್ಳುತ್ತಿದ್ದೇನೆ’ : ಶೋಭಾ ಕರಂದ್ಲಾಜೆ

    ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮತದಾನ ನಡೆಯಲಿದೆ.

    ಚುನಾವಣಾ ಆಯೋಗದ ಪ್ರಕಾರ, ಮಾರ್ಚ್ 27 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾರ್ಚ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 30 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

    ತಮಿಳುನಾಡಿನಲ್ಲಿ ಸಿದ್ಧತೆ: ನೆರೆಯ ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಲ್ರಿಯೆ ಪ್ರಾರಂಭವಾಗಿದೆ. ಈ ತಿಂಗಳ 27ರವರೆಗೆ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಮಾತ್ರ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತಿದೆ.

    ನಾಮನಿರ್ದೇಶನ ಅಧಿಕಾರಿಗಳ ಕಚೇರಿಯಿಂದ 100 ಮೀಟರ್ ದೂರದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಯಾಣಿಸುವ ವಾಹನಗಳನ್ನು ಅನುಮತಿಸಲಾಗುವುದು. ಚುನಾವಣಾಧಿಕಾರಿಗಳ ಕಚೇರಿಯೊಳಗೆ ಅಭ್ಯರ್ಥಿ ಸೇರಿದಂತೆ ಐವರಿಗೆ ಮಾತ್ರ ಪ್ರವೇಶ. ಮಧ್ಯಾಹ್ನ 3 ಗಂಟೆಯ ನಂತರ ಚುನಾವಣಾಧಿಕಾರಿಗಳ ಕಚೇರಿಗೆ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ತಮ್ಮ ನಾಮಪತ್ರಗಳೊಂದಿಗೆ ರೂ.25 ಸಾವಿರವನ್ನು ಠೇವಣಿಯಾಗಿ ಪಾವತಿಸಬೇಕು. ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳು 12,500ರೂ. ಪಾವತಿಸಬೇಕು. ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಸೇರಿದ ಅಭ್ಯರ್ಥಿಗಳು ಪಕ್ಷದ ಚಿಹ್ನೆಗಳನ್ನು ಪಡೆಯಲು ಪಕ್ಷದ ಪ್ರಧಾನ ಕಛೇರಿಯಿಂದ ಎ ಮತ್ತು ಬಿ ನಮೂನೆಗಳನ್ನು ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳು ನಾಮಪತ್ರಗಳ ಜೊತೆಗೆ ತಮ್ಮ ಆಸ್ತಿ ವಿವರಗಳನ್ನು ಲಗತ್ತಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.

    7ಹಂತದಲ್ಲಿ ಚುನಾವಣೆ: ಏಪ್ರಿಲ್ 26ರಂದು ಎರಡನೇ ಹಂತ, ಮೇ 7ರಂದು ದೂರನೇ ಹಂತ, ಮೇ 13 ರಂದು ನಾಲ್ಕನೇ ಹಂತ, ಮೇ 20ರಂದು ಐದನೇ ಹಂತ, ಮೇ 25 ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದೆ.

    ವಿದೇಶಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts