More

    ಕಾಂಗ್ರೆಸ್​ಗೆ ಮತ್ತೊಂದು ಶಾಕ್!: ಕಾಂಗ್ರೆಸ್​ ತೊರೆದ ಹಾಲಿ ಸಂಸದ ಬಿಜೆಪಿ ಸೇರ್ಪಡೆ!

    ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸ್ತಿದ್ದು, ಪಕ್ಷಾಂತರ ಪರ್ವ ಕೂಡ ಜೋರಾಗಿದೆ. ಕಾಂಗ್ರೆಸ್​ ಭಾರೀ ಹಿನ್ನಡೆಯಾಗಿದೆ. ಪಂಜಾಬ್‌ನ ಲೂಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಪಕ್ಷ ತೊರೆದು ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ.

    ಇದನ್ನೂ ಓದಿ: ಉತ್ತರಪ್ರದೇಶ: ಚುನಾವಣಾ ಪ್ರಚಾರಕ್ಕೆ ಮಾರ್ಚ್ 30 ರಂದು ಪ್ರಧಾನಿ ಮೋದಿ ಚಾಲನೆ!

    ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರವನೀತ್ ಸಿಂಗ್ ಬಿಟ್ಟು, ಬಿಜೆಪಿ ಪಂಜಾಬ್‌ನ ಮೇಲೆ ಹೆಚ್ಚಿನ ಪ್ರೀತಿಯನ್ನು ಹೊಂದಿದೆ ಎಂಬ ವಿಶ್ವಾಸವಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪಂಜಾಬ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲು ಬಯಸಿದ್ದಾರೆ ಎಂದು ಹೇಳಿದರು.

    ನಾವು ಪಂಜಾಬ್ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯತ್ತೇವೆ. ಇಡೀ ದೇಶವೇ ಅಭಿವೃದ್ಧಿಯತ್ತ ಸಾಗುತ್ತಿದ್ದರೆ ಪಂಜಾಬ್​ ಮಾತ್ರ ಯಾಕೆ ಹಿಂದುಳಿದಿದೆ ಎಂದು ಪರೋಕ್ಷವಾಗಿ ಎಎಪಿ ಮತ್ತು ಕಾಂಗ್ರೆಸ್​ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಭಯೋತ್ಪಾದನೆಯ ಕರಾಳ ದಿನಗಳನ್ನು ಸ್ಮರಿಸಿದ ಅವರು, ಶಾಂತಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದರು.

    ಪಂಜಾಬ್‌ನ ಲೂಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಕಾಂಗ್ರೆಸ್​ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬರಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಸ್ವಂತವಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಬಿಟ್ಟು ಹಿನ್ನೆಲೆ: ರವನೀತ್ ಸಿಂಗ್ ಬಿಟ್ಟು ರಾಜಕೀಯ ಕುಟುಂಬದಿಂದ ಬಂದವರು. ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗ ಮತ್ತು ಮಾಜಿ ಪಂಜಾಬ್ ಸಚಿವ ತೇಜ್ ಪ್ರಕಾಶ್ ಸಿಂಗ್ ಅವರ ಮಗ.

    ರವನೀತ್ ಸಿಂಗ್ ಈ ಹಿಂದೆ 2021ರ ಮಾರ್ಚ್‌ನಿಂದ ಜುಲೈ ವರೆಗೆ ಕಾಂಗ್ರೆಸ್ ಸಂಸದರಾಗಿ ಸೇವೆ ಸಲ್ಲಿಸಿದ್ದರು. 2014, 2019ರ ಅಸೆಂಬ್ಲಿ ಚುನಾವಣೆಗಳಲ್ಲಿ ಲೂಧಿಯಾನದಿಂದ ಮತ್ತು 2009ರಲ್ಲಿ ಆನಂದಪುರ ಸಾಹಿಬ್‌ನಿಂದ ಸಂಸದರಾಗಿ ಆಯ್ಕೆ ಆಗಿದ್ದರು. 2009 ರ ಲೋಕಸಭೆ ಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಡಾ ದಲ್ಜಿತ್ ಸಿಂಗ್ ಚೀಮಾ ಅವರನ್ನು 67,204 ಮತಗಳ ಅಂತರದಿಂದ ಸೋಲಿಸಿದ್ದರು.

    ಚುನಾವಣಾ ಮಾಹಿತಿ: ಏಪ್ರಿಲ್​ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್​ 1ರಂದು ಕೊನೆಯ 7ನೇ ಹಂತದ ಮತದಾನ ನಡೆಯಲಿದೆ. ಜೂನ್​ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಏಪ್ರಿಲ್ 19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ 89 ಕ್ಷೇತ್ರಗಳಿಗೆ, ಮೂರನೇ ಹಂತದಲ್ಲಿ 94 ಕ್ಷೇತ್ರಗಳು, ನಾಲ್ಕನೇ ಹಂತದಲ್ಲಿ 96, ಐದನೇ ಹಂತದಲ್ಲಿ 49, ಆರನೇ ಹಂತದಲ್ಲಿ 57 ಮತ್ತು ಏಳನೇ ಹಂತದಲ್ಲಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

    ರಾಜಕೀಯಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟಿ ಅನುಷ್ಕಾ ಶೆಟ್ಟಿ..! ಈ ಪಕ್ಷದಿಂದ ಎಂಎಲ್​ಎ ಎಲೆಕ್ಷನ್‌ಗೆ ಸ್ಪರ್ಧೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts