More

    Lok Sabha polls 2024: ಲೋಕಸಭೆಗೆ ಈ ಬಾರಿ ಖರ್ಗೆ ಸ್ಪರ್ಧೆ ಇಲ್ಲ?

    ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ವರದಿಗಳನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ತಳ್ಳಿಹಾಕಿದ್ದು, ಒಂದು ವೇಳೆ ಕಾರ್ಯಕರ್ತರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಹೇಳಿದ್ದಾರೆ.

    ಚುನಾವಣಾ ಕಣದಿಂದ ಹಿಂದೆ ಸರಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ನಾವು ಹಿಂದೆ ಸರಿಯುತ್ತಿದ್ದೇವೆ ಎಂದು ಸೂಚಿಸುವುದು ತಪ್ಪು. ನನಗೆ ಈಗ 83 ವರ್ಷ. ನೀವು (ಪತ್ರಕರ್ತರು) 60-65 ವರ್ಷಕ್ಕೆ ನಿವೃತ್ತಿ ಪಡೆಯುತ್ತೀರಿ. ನಾನು 83 ಆದ ಮೇಲೆ ನಿವೃತ್ತಿ ಪಡೆಯುವುದು ತಪ್ಪೇ ಎಂದು ಪ್ರಶ್ನಿಸಿದರು. ಹಾಗಾಗಿ ವಯಸ್ಸಿನ ಕಾರಣದಿಂದ ಈ ಬಾರಿ ಚುನಾವಣಾ ಸ್ಪರ್ಧೆಗೆ ಇಳಿಯುವುದಿಲ್ಲ ಎಂದು ಖರ್ಗೆ ಸೂಚಿಸಿದ್ದಾರೆ.

    ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆಯಿದೆ. ಖರ್ಗೆ ಅವರು ತಮ್ಮ ತವರು ಕ್ಷೇತ್ರವಾದ ಗುಲ್ಬರ್ಗದಿಂದ ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಿಲ್ಲಿಸಬಹುದು ಎಂದು ವರದಿಗಳು ಸೂಚಿಸಿವೆ.

    ರಾಧಾಕೃಷ್ಣ ದೊಡ್ಡಮನಿ ಅವರು ಉದ್ಯಮಿಯಾಗಿದ್ದು, ಶಿಕ್ಷಣ ಸಂಸ್ಥೆಗಳನ್ನು ಸಹ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲ, 1972 ಮತ್ತು 2004 ರ ನಡುವೆ ಖರ್ಗೆ ಪ್ರತಿನಿಧಿಸುತ್ತಿದ್ದ ಗುರ್ಮಿಟ್ಕಲ್ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಜೊತೆ ದೊಡ್ಡಮನಿ ಒಡನಾಟ ಚೆನ್ನಾಗಿದೆ ಎಂದು ವರದಿಯಾಗಿದೆ.

    ಖರ್ಗೆ ಗುಲ್ಬರ್ಗದಿಂದ 2009 ಮತ್ತು 2014 ರಲ್ಲಿ ಗೆದ್ದರು. ಆದರೆ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತರು. ಖರ್ಗೆ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಸಮಾಲೋಚಿಸಿದ ನಂತರ ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

    ದೊಡ್ಡಮನಿ ಅವರನ್ನು ಗುಲ್ಬರ್ಗದಿಂದ ಕಣಕ್ಕಿಳಿಸಬಹುದೇ ಅಥವಾ ಬೇಡವೇ ಎಂಬ ಬಗ್ಗೆಯೂ ಅವರು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಇತ್ತ ಖರ್ಗೆ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ. 

    ಶ್ವಾನ ಪ್ರಿಯರೇ ಗಮನಿಸಿ, ಈ ತಳಿಯ ನಾಯಿಗಳನ್ನು ಖರೀದಿಸೋ ಪ್ಲಾನ್ ಇದ್ದರೆ ಎಚ್ಚರ! ಅದಕ್ಕೂ ಮುನ್ನ ಈ ಸುದ್ದಿ ತಪ್ಪದೇ ಓದಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts