More

  ಜಗದೀಶ್ ಶೆಟ್ಟರ್​ಗೆ ಲೋಕಸಭಾ ಟಿಕೆಟ್ ಫಿಕ್ಸ್​? ಎಂ.ಪಿ. ರೇಣುಕಾಚಾರ್ಯ ಕೊಟ್ಟ ಉತ್ತರವಿದು!

  ಬೆಂಗಳೂರು: ಕಾಂಗ್ರೆಸ್​ನಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ದಿಢೀರ್​ ಕೈ ತೊರೆದು ಮರಳಿ ಕಮಲ ಸೇರಿದ ವಿಷಯ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿತು. ಇದೆಲ್ಲದರ ನಡುವೆ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಶೆಟ್ಟರ್​ಗೆ ಟಿಕೆಟ್​ ಸಿಗುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

  ಈ ಕುರಿತು ಮಾತನಾಡಿದ ಮಾಜಿ ಸಚಿವರು, “ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಭೂಪೇಂದ್ರ, ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಸಾರಥ್ಯದಲ್ಲಿ ಜಗದೀಶ್​ ಶೆಟ್ಟರ್​ ಅವರನ್ನು ಭಾರತೀಯ ಜನತಾ ಪಾರ್ಟಿಗೆ ಸೇರಿದರು. ಅವರು ಯಾವುದೋ ಕಾರಣಕ್ಕೆ ಹೋಗಿದ್ದರು. ಈ ದೇಶದಲ್ಲಿ ಮತ್ತೊಮ್ಮೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ನೋಡಬೇಕು ಎಂಬುದು ಅವರ ಆಸೆ” ಎಂದರು.

  “ಈ ಕಾರಣಕ್ಕೆ ಅವರು ಮರಳಿ ಬಿಜೆಪಿಗೆ ಸೇರಿದ್ದಾರೆ. ರಾಜ್ಯದಲ್ಲಿ ಪ್ರವಾಸ ಮಾಡಿ, ಸಂಘಟನೆ ಮಾಡಿ 28 ಲೋಕಸಭೆ ಕೂಡ ಗೆಲ್ಲಿಸಬೇಕು ಎಂಬ ಲೆಕ್ಕಾಚಾರದಲ್ಲಿ ಬಂದಿದ್ದಾರೆ. ಟಿಕೆಟ್​ ವಿಚಾರ…….” ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಿನ ವಿಡಿಯೋ ವೀಕ್ಷಿಸಿ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts