More

    ಡಿಸಿಸಿ ಬ್ಯಾಂಕ್ ಚುನಾವಣೆ, ಯೋಗ್ಯರಿಗೆ ಅವಕಾಶ – ಸಚಿವ ರಮೇಶ ಜಾರಕಿಹೊಳಿ

    ಬೋರಗಾಂವ: ನವೆಂಬರ್ 6ರಂದು ಜರುಗಲಿರುವ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಶಾಸಕರಾದ ಉಮೇಶ ಕತ್ತಿ ಹಾಗೂ ಬಾಲಚಂದ್ರ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ. ಅವರ ನಿರ್ಧಾರವೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

    ಶನಿವಾರ ಪಟ್ಟಣದ ಅರಿಹಂತ ಉದ್ಯೋಗ ಸಮೂಹ ಸಂಸ್ಥಾಪಕ ರಾವಸಾಹೇಬ್ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದರು.

    ಜಿಲ್ಲೆಯ ರೈತರು ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಡಿಸಿಸಿ ಬ್ಯಾಂಕ್ ಪ್ರಮುಖ ಪಾತ್ರ ವಹಿಸಿದೆ. ಬ್ಯಾಂಕ್ ಮೂಲಕ ರೈತರಿಗೆ ಅಗತ್ಯ ನೆರವು ನೀಡಲಾಗುತ್ತಿದೆ. ಡಿಸಿಸಿ ಬ್ಯಾಂಕ್‌ಅನ್ನು ಮಾಜಿ ಸಂಸದ ರಮೇಶ ಕತ್ತಿ ಅವರು ಮಾದರಿಯಾಗಿ ರೂಪಿಸಿದ್ದಾರೆ ಎಂದು ಬಣ್ಣಿಸಿದರು.

    ಜಿಲ್ಲೆಯಲ್ಲಿ ಬಾಕಿ ನೀರಾವರಿ ಯೋಜನೆ ಸೇರಿ ನೂತನ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದರು.
    ದಿ.ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಸಚಿವ ರಮೇಶ ತಿಳಿಸಿದರು.

    ಅರಿಹಂತ ಉದ್ಯೋಗ ಸಮೂಹ ಸಂಸ್ಥಾಪಕ ರಾವಸಾಹೇಬ್ ಪಾಟೀಲ, ಉದ್ಯಮಿ ಅಭಿನಂದನ ಪಾಟೀಲ, ಪಿಕೆಪಿಎಸ್ ಚೇರ್ಮನ್ ಉತ್ತಮ ಪಾಟೀಲ, ಜಿಪಂ ಸದಸ್ಯ ಟಿ.ಆರ್.ಕಾಗಲ್, ಕಿರಣ ಪಾಟೀಲ, ಬಂಡಾ ಪಾಟೀಲ, ಅಮರ ಶಿಂತ್ರೆ, ಚಂದು ಪಾಟೀಲ, ಅಶೋಕ ಬಂಕಾಪುರೆ, ಶಾಂತಿನಾಥ ತೇರದಾಳೆ, ಪ್ರಕಾಶ ಜಂಗಟೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts