More

  ರಾಷ್ಟ್ರೀಯ ಲೋಕ ಅದಾಲತ್ ಸೆ. 9ಕ್ಕೆ

  ಧಾರವಾಡ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ. 9ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸೂಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ವೈವಾಹಿಕ ಪ್ರಕರಣ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ, ಕಾನೂನಿನಲ್ಲಿ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  See also  ಕೋರ್ಟ್​ಗೆ ಕಾಂಡೋಮ್​ ಗಿಫ್ಟ್​ ಕಳುಹಿಸಿಕೊಟ್ಟ ಮಹಿಳೆ! ಅನ್ಯಾಯಕ್ಕೆ ಇದೇ ಉತ್ತರ ಎಂದ ಹೋರಾಟಗಾರ್ತಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts