ಲೋಕಪ್ಪ ಬಿದರಗಡ್ಡಿ ರಾಜ್ಯಮಟ್ಟಕ್ಕೆ ಆಯ್ಕೆ

Ull_Lokappa Bidargaddi
Published on

ಉಳ್ಳಾಲ: ಬೆಂಗಳೂರು ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವಸಬಲೀಕರಣ ಮತ್ತು ದಕ್ಷಿಣ ಕನ್ನಡ ಕ್ರೀಡಾ ಇಲಾಖೆ ಸಹಯೋಗದಲ್ಲಿ ನಡೆದ ದ.ಕ. ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಉರುಮಣೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಶಿಕ್ಷಕ ಲೋಕಪ್ಪ ಬಿದರಗಡ್ಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

400 ಮೀಟರ್ ಮಿಡ್ಲ್ ರಿಲೇ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ, 100 ಮೀಟರ್ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ, 400 ಮೀಟರ್ ಫ್ರೀ ಸ್ಟೈಲ್ ರಿಲೇಯಲ್ಲಿ ಬೆಳ್ಳಿ ಪದಕ, 50 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರೇಷ್ಮೆ ಇಲಾಖೆ ನಿವೃತ್ತ ಇನ್‌ಸ್ಪೆಕ್ಟರ್, ಈಜು ತರಬೇತುದಾರ ಬಿ.ಕೆ.ನಾಯ್ಕ ಅವರಿಂದ ತರಬೇತಿ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net