21.7 C
Bengaluru
Tuesday, January 21, 2020

ಮೂವರು ಸವಾರರು ಸಾವು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಲೋಕಾಪುರ: ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಸಮೀಪದ ಕೊಡಬಾಗಿ ಪೆಟ್ರೋಲ್ ಬಂಕ್ ಹತ್ತಿರ ಮಂಗಳವಾರ ಸಂಜೆ 4 ಗಂಟೆಗೆ ಕಾರು ಮತ್ತು ಎರಡು ಬೈಕ್‌ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಡಕಿ ಗ್ರಾಮದ ಪಾಂಡಪ್ಪ ಕೀರಪ್ಪ ದಾಸರ (42), ಸವದತ್ತಿ ತಾಲೂಕಿನ ಮುನ್ನೋಳ್ಳಿ ಗ್ರಾಮದ ಮದರಸಾಬ ಮೌಲಾಸಾಬ ವಟ್ನಾಳ (45), ಜಕಬಾಳ ಗ್ರಾಮದ ಅಶೋಕ ಯಲ್ಲಪ್ಪ ಮಾನೋಮಿ(50) ಮೃತಪಟ್ಟಿದ್ದಾರೆ. ಕಾರು ಮಾಲೀಕ ವಿಶ್ವನಾಥ ಜಿಗಜಿಣಗಿ ಅವರ ತಲೆಗೆ ಪೆಟ್ಟು ಬಿದ್ದಿದೆ. ಅವರ ಪತ್ನಿ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು
ಅಪಘಾತಕ್ಕೀಡಾದ ಕಾರು ಬೆಳಗಾವಿಯಿಂದ ಲೋಕಾಪುರ ಕಡೆಗೆ ಬರುತ್ತಿತ್ತು. ಎರಡು ಬೈಕ್‌ಗಳ ಮೇಲಿದ್ದ ಸವಾರರು ಲೋಕಾಪುರದಿಂದ ತಮ್ಮ ಗ್ರಾಮಗಳಿಗೆ ಹೊರಟಿದ್ದರು. ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣಕ್ಕೆ ಬಾರದೆ ಮೊದಲಿಗೆ ಒಂದು ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಅಂದಾಜು 15 ಅಡಿ ಹಾರಿ ವಾಹನದ ಬೋನಟ್ ಮೇಲೆ ಶವವಾಗಿ ಬಿದ್ದಿದ್ದು, ಅದನ್ನು ಕಬ್ಬಿನ ಗದ್ದೆಯಲ್ಲಿ ಎಳೆದುಕೊಂಡು ಹೋಗಿದೆ. ರಸ್ತೆ ಮೇಲೆ ಇಬ್ಬರು ಸವಾರರ ಶವಗಳು ಬಿದ್ದಿದ್ದವು.

ಘಟನಾ ಸ್ಥಳಕ್ಕೆ ಎಸ್.ಪಿ ಲೋಕೇಶ ಜಗಲಾಸರ್, ಡಿವೈಎಸ್ಪಿ ಆರ್.ಕೆ.ಪಾಟೀಲ, ಪಿಎಸ್‌ಐ ಈರಪ್ಪ ರಿತ್ತಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಒತ್ತಾಯ
ಲೋಕಾಪುರದಿಂದ ಬೆಳಗಾವಿ ಕಡೆಗೆ ಹೋಗುವ ಮಾರ್ಗದಲ್ಲಿ ಮಲ್ಲಾಪುರ ಗುಡ್ಡದವರೆಗೆ 5ಕಿ.ಮೀ. ಅಪಘಾತ ವಲಯವಾಗಿದೆ. ಇಲ್ಲಿ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಇಲಾಖೆಯವರು ಈ ಕಡೆ ಗಮನ ಹರಿಸಿ ಸೂಚನಾ ಲಕ, ಹಂಪ್ಸ್ ನಿರ್ಮಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...