20.4 C
Bangalore
Monday, December 9, 2019

ಸರ್ಕಾರಿ ಶಾಲೆಗಳಿಗೆ ದುರಸ್ತಿ ಭಾಗ್ಯ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಪ್ರಕಾಶ್ ಮಂಜೇಶ್ವರ ಮಂಗಳೂರು

ಮನೆ ಸದಸ್ಯಳ(ನ) ಮದುವೆಗೆ ಕುಟುಂಬ ಸದಸ್ಯರೆಲ್ಲರಿಗೂ ಹೊಸ ಉಡುಪು ಖರೀದಿಸುವಂತೆ ಲೋಕಸಭಾ ಚುನಾವಣೆಗೆ ಜಿಲ್ಲೆಯ ಎಲ್ಲ ಮತದಾನ ಕೇಂದ್ರಗಳು ಸಜ್ಜಾಗುತ್ತಿವೆ!

ಲೋಕಸಭಾ ಚುನಾವಣೆಗೆ(2019) ಮತಗಟ್ಟೆಗಳನ್ನಾಗಿ ಘೋಷಿಸಲಾಗಿರುವ ದಕ್ಷಿಣ ಕನ್ನಡದ ಒಟ್ಟು 273 ಸರ್ಕಾರಿ ಪ್ರಾಥಮಿಕ/ ಪ್ರೌಢಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು 63.44 ಲಕ್ಷ ರೂ. ಬಿಡುಗಡೆಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಉಡುಪಿ ಜಿಲ್ಲೆಗೆ 48 ಲಕ್ಷ ರೂ. ಬಿಡುಗಡೆಯಾಗಿದೆ.

ಏನೇನು ಕೆಲಸಗಳು?
ಪ್ರಸ್ತಾವಿತ ಯೋಜನೆಯಲ್ಲಿ ಕೊಠಡಿ, ಶೌಚಗೃಹ ದುರಸ್ತಿ, ರ‌್ಯಾಂಪ್, ವಿದ್ಯುತ್‌ದೀಪ ವ್ಯವಸ್ಥೆ, ಸುಣ್ಣ- ಬಣ್ಣ, ಕಿಟಕಿ, ಬಾಗಿಲು ವ್ಯವಸ್ಥೆ, ಕುಡಿಯುವ ನೀರಿನ ಪೂರೈಕೆ ಮುಂತಾದ ಅಗತ್ಯ ಸೌಲಭ್ಯಗಳನ್ನು ಸರ್ಕಾರ ನೀಡಿದ ಅನುದಾನದಲ್ಲಿ ಶಾಲೆಗೆ ಒದಗಿಸಲು ಅವಕಾಶವಿದೆ. ಹೊಸ ಕೊಠಡಿ, ಶೌಚಗೃಹ, ದೂರವಾಣಿ ಸಂಪರ್ಕ, ಮೇಲ್ಛಾವಣಿ ಅಳವಡಿಸುವಂತಹ ಬೃಹತ್ ಕಾಮಗಾರಿ ನಡೆಸಲು ಇದರಲ್ಲಿ ಅವಕಾಶವಿಲ್ಲ. ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಏಪ್ರಿಲ್ 10 ಡೆಡ್‌ಲೈನ್. ಸೆಕ್ಟರ್ ಅಧಿಕಾರಿ ಹಾಗೂ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ನೀಡಿದ ವರದಿ ಆಧರಿಸಿ ಸೌಲಭ್ಯ ಒದಗಿಸಬೇಕಾದ ಶಾಲೆಗಳ ಪಟ್ಟಿ ಸಿದ್ಧಪಡಿಸಲಾಗುತ್ತದೆ.

ಅನುಷ್ಠಾನ ಹಂತ: ಜಿಲ್ಲಾ ಪಂಚಾಯಿತಿಯ ಇಂಜಿನಿಯರಿಂಗ್ ಇಲಾಖೆ ಯೋಜನೆ ಕಾಮಗಾರಿ ಅನುಷ್ಠಾನಗೊಳಿಸಲಿದೆ. ಚುನಾವಣೆ ನಡೆಯುವ ಒಂದು ವಾರದ ಮೊದಲು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳು ಇರುವ ಸರ್ಕಾರಿ ಶಾಲೆಗಳಲ್ಲಿ ತಪಾಸಣೆ ನಡೆಸಿ ಅಲ್ಲಿ ಅಗತ್ಯ ಮೂಲಸೌಕರ್ಯಗಳು ಪೂರ್ಣಗೊಂಡು ಭೌತಿಕವಾಗಿ ಮತಗಟ್ಟೆ ಸಜ್ಜುಗೊಂಡಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಚುನಾವಣೆ ಮುಗಿದ ಒಂದು ವಾರದ ಒಳಗಾಗಿ ಅನುದಾನ ಬಳಕೆ ಬಗ್ಗೆ ಮತಗಟ್ಟೆ ಶಾಲಾವಾರು ಕೈಗೊಂಡ ಕಾಮಗಾರಿ ಪೂರ್ಣ ವಿವರ, ಜಿಎಸ್‌ಟಿ ಬಿಲ್ ಸಹಿತ ಖರ್ಚು- ವೆಚ್ಚದ ಲೆಕ್ಕಪತ್ರ ಹಾಗೂ ಹಣ ಬಳಕೆ ಪ್ರಮಾಣಪತ್ರ ಹಾಗೂ ಕಾಮಗಾರಿ ಪ್ರಾರಂಭಿಸುವ ಮೊದಲು ಮತ್ತು ಬಳಿಕದ ಛಾಯಾಚಿತ್ರಗಳನ್ನು ಕಡ್ಡಾಯವಾಗಿ ಅನುಷ್ಠಾನ ಅಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಸಲ್ಲಿಸಬೇಕಾಗಿದೆ.

ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಮತಗಟ್ಟೆಗಳಿರುವ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು 48 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿ ನಡೆಯುತ್ತಿದೆ. ಮತದಾನಕ್ಕೆ ಆಗಮಿಸುವ ಮತದಾರರು ಹಾಗೂ ಅಧಿಕಾರಿಗಳನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರು, ವಿದ್ಯುತ್ ದೀಪ ವ್ಯವಸ್ಥೆ, ಕಿಟಕಿ, ಬಾಗಿಲು ದುರಸ್ತಿ ಮುಂತಾದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
|ಶೇಷ ಶಯನ, ಡಿಡಿಪಿಐ, ಉಡುಪಿ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭಕ್ಕೆ ಹೋಲಿಸಿದರೆ ಪ್ರಸಕ್ತ ಲೋಕಸಭಾ ಚುನಾವಣೆಗೆ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ದುರಸ್ತಿ ಕಾಮಗಾರಿ, ಮೂಲಸೌಕರ್ಯ ಪೂರೈಕೆ ಸಾಧ್ಯವಾಗುತ್ತಿದೆ. ವಿಧಾನಸಭೆ ಚುನಾವಣೆಗೆ ಬಂಟ್ವಾಳದಲ್ಲಿ ಐದು ಶಾಲೆಗಳಲ್ಲಿ ಕಾಮಗಾರಿ ನಡೆದಿದ್ದರೆ, ಪ್ರಸ್ತುತ ಲೋಕಸಭೆ ಚುನಾವಣೆಗೆ 96 ಶಾಲೆಗಳಿಗೆ ಯೋಜನೆ ಸೌಲಭ್ಯ ದೊರೆಯುತ್ತಿದೆ.
|ಶಿವಪ್ರಕಾಶ್, ಕ್ಷೇತ್ರ ಶಿಕ್ಷಣ ಅಧಿಕಾರಿ, ಬಂಟ್ವಾಳ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...