ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲಿಯೇ ಪರಿಷತ್ ಚುನಾವಣೆ ಕಡೆಗೆ ವಾಲಿದ ಮುಖಂಡರು

loka election
cong, jds, bjp
Published on

ಬೆಂಗಳೂರು:
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲಿಯೇ ವಿಧಾನ ಪರಿಷತ್ ಚುನಾವಣೆ ಕಡೆಗೆ ರಾಜಕೀಯ ನಾಯಕರುಗಳು ಹೊರಳಿದ್ದಾರೆ.
ವಿಧಾನ ಪರಿಷತ್ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವವರ ಹೆಸರು ೋಷಣೆಯಾದ ಬೆನ್ನಲ್ಲಿಯೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ರಾಜಕೀಯ ಚಟುವಟಿಕೆಗಳು ಚುರುಕಾಗಿವೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಒಟ್ಟಾಗಿ ಚುನಾವಣೆ ಎದುರಿಸಲಿದ್ದರೆ, ಕಾಂಗ್ರೆಸ್ ಏಕಾಂಗಿಯಾಗಿ ಎಲ್ಲಾ ಸ್ಥಾನಗಳಲ್ಲಿಯೂ ಸ್ಪರ್ಧೆ ಮಾಡಿದೆ.
ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರುಗಳು, ಬಿಜೆಪಿ ಅಭ್ಯರ್ಥಿ ಪರವಾಗಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮಾಜಿ ಸಚಿವರು ಹಾಗೂ ಪ್ರಮುಖ ನಾಯಕರುಗಳು ಅಭ್ಯರ್ಥಿಗಳ ಜೊತೆಯಲ್ಲಿ ಭಾಗವಹಿಸಿದ್ದಾರೆ. ಒಟ್ಟಾರೆ, ಮೂರು ಪಕ್ಷಗಳಲ್ಲಿಯೂ ಚುನಾವಣೆ ಪ್ರಚಾರಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net